ಕೆ.ಗೋವಿಂದ ಭಟ್ಟರಿಗೆ ಚಿಟ್ಟಾಣಿ ಪ್ರಶಸ್ತಿ
Update: 2022-10-20 19:39 IST
ಉಡುಪಿ: ಉಡುಪಿಯ ಚಿಟ್ಟಾಣಿ ಅಭಿಮಾನಿ ಬಳಗ ಚಿಟ್ಟಾಣಿ ಸಂಸ್ಮರಣ ಯಕ್ಷಗಾನ ಸಪ್ತಾಹ ಸಂದರ್ಭದಲ್ಲಿ ನೀಡುವ ಪದ್ಮಶ್ರೀ ಚಿಟ್ಟಾಣಿ ರಾಮಚಂದ್ರ ಹೆಗಡೆ ಪ್ರಶಸ್ತಿಗೆ ಈ ಬಾರಿ ತೆಂಕುತಿಟ್ಟಿನ ಹಿರಿಯ ಕಲಾವಿದ ಕೆ. ಗೋವಿಂದ ಭಟ್ ಅವರನ್ನು ಆಯ್ಕೆ ಮಾಡಿದೆ.
ಇದರೊಂದಿಗೆ ಇದೇ ಸಂದರ್ಭದಲ್ಲಿ ನೀಡುವ ಟಿ.ವಿ.ರಾವ್ ಪ್ರಶಸ್ತಿಗೆ ಸಿಂಡಿಕೇಟ್ ಬ್ಯಾಂಕ್‌ನ ನಿವೃತ್ತ ಅಧಿಕಾರಿ ಸತ್ಯವತಿ ಡಿ. ಹೆಬ್ಬಾರ್ ಆಯ್ಕೆಯಾಗಿದ್ದಾರೆ.
ಅ.27ರಿಂದ ನವಂಬರ್ 2ರವರೆಗೆ ಶ್ರೀಕೃಷ್ಣ ಮಠದ ರಾಜಾಂಗಣದಲ್ಲಿ ಚಿಟ್ಟಾಣಿ ಸಪ್ತಾಹ ನಡೆಯಲಿದ್ದು, ನ.2ರಂದು ಪ್ರಶಸ್ತಿ ಪ್ರದಾನ ನಡೆಯಲಿದೆ ಎಂದು ಚಿಟ್ಟಾಣಿ ಅಭಿಮಾನಿ ಬಳಗದ ಅಧ್ಯಕ್ಷ ಡಾ.ತಲ್ಲೂರು ಶಿವರಾಮ ಶೆಟ್ಟಿ, ಕಾರ್ಯದರ್ಶಿ ಎಂ. ಗೋಪಿಕೃಷ್ಣ ರಾವ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.