ರಾಷ್ಟ್ರಪತಿ ಮುರ್ಮು ವಿರುದ್ಧ ಅವಹೇಳನಕಾರಿ ಹೇಳಿಕೆ ಆರೋಪ: ಪತ್ರಕರ್ತ ವಿಶ್ವೇಶ್ವರ ಭಟ್ ಗೆ NCW ಸಮನ್ಸ್

Update: 2022-10-21 07:40 GMT
ವಿಶ್ವೇಶ್ವರ ಭಟ್ (Photo: Twitter)

ಹೊಸದಿಲ್ಲಿ: ರಾಷ್ಟ್ರಪತಿ  ದ್ರೌಪದಿ ಮುರ್ಮು ಅವರ ವಿರುದ್ಧ ಮಾಡಿದ್ದಾರೆನ್ನಲಾದ ಅವಹೇಳನಕಾರಿ ಹೇಳಿಕೆಗಳಿಗೆ ಸಂಬಂಧಿಸಿದಂತೆ ರಾಷ್ಟ್ರೀಯ ಮಹಿಳಾ ಆಯೋಗ (NCW) ವಿಶ್ವವಾಣಿ ಪತ್ರಿಕೆಯ ಪ್ರಧಾನ ಸಂಪಾದಕರಾದ ವಿಶ್ವೇಶ್ವರ ಭಟ್ ಅವರಿಗೆ ಸಮನ್ಸ್ ನೀಡಿದೆ.

"ರಾಷ್ಟ್ರೀಯ ಮಹಿಳಾ ಆಯೋಗ ಗೌರವಾನ್ವಿತ ರಾಷ್ಟ್ರಪತಿ ವಿರುದ್ಧ ಅವಹೇಳನಕಾರಿ ಪೋಸ್ಟ್ ಅನ್ನು ಗುರುತಿಸಿದೆ. ಆಯೋಗವು ಅಕ್ಟೋಬರ್ 26ರಂದು ಮಧ್ಯಾಹ್ನ 12.30 ಕ್ಕೆ ವಿಚಾರಣೆಗೆ ಖುದ್ದಾಗಿ ಹಾಜರಾಗುವಂತೆ ಪತ್ರಕರ್ತ ವಿಶ್ವೇಶ್ವರ ಭಟ್ ಅವರಿಗೆ  ನೋಟಿಸ್ ಕಳುಹಿಸಿದೆ" ಎಂದು NCW ಟ್ವೀಟ್ ಮಾಡಿದೆ.

ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ವಿಶ್ವವಾಣಿ ಪತ್ರಿಕೆಯ ಪ್ರಧಾನ ಸಂಪಾದಕ ವಿಶ್ವೇಶ್ವರ್ ಭಟ್ ಅವರು ತಮ್ಮ ಅಂಕಣದಲ್ಲಿ ಅವಮಾನಿಸಿದ್ದಾರೆ ಎಂದು ಇತ್ತೀಚಿಗೆ ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕ ಟೀಕೆಗೆ ಕಾರಣವಾಗಿತ್ತು. ತಮ್ಮ ಅಂಕಣದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಬಣ್ಣವನ್ನು ಅವಮಾನಿಸಿ ನಿಂದಿಸಿದ್ದಾರೆ ಎಂದು ಆರೋಪಿಸಿ ವಿಶ್ವೇಶ್ವರ್ ಭಟ್ ಅವರ ವಿರುದ್ಧ ಟೀಕೆ ವ್ಯಕ್ತವಾಗಿತ್ತು.

ನಂತರ ಅವರು ತಮ್ಮ ಮಾತನ್ನು ಅವರು ಬಲವಾಗಿ ಸಮರ್ಥಿಸಿಕೊಂಡಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News