ಮೈಸೂರು | ತರಗತಿ ನಡೆಯುತ್ತಿದ್ದಾಗಲೇ ಕುಸಿದ ಮಹಾರಾಣಿ ಮಹಿಳಾ ಕಾಲೇಜಿನ ಗೋಡೆ

Update: 2022-10-21 12:08 GMT

ಮೈಸೂರು, ಅ.21: ಮೈಸೂರು ವಿಶ್ವವಿದ್ಯಾನಿಲಯದ ಪ್ರತಿಷ್ಠಿತ ಮಹಾರಾಣಿ ಮಹಿಳಾ ಕಾಲೇಜಿನ ಗೋಡೆಯ ಶುಕ್ರವಾರ ಬೆಳಗ್ಗೆ  ತರಗತಿ ನಡೆಯುತ್ತಿದ್ದ ವೇಳೆಯೇ ಕುಸಿದಿದೆ.

ಮೈಸೂರು ಅರಸು ರಸ್ತೆ ಮುಂಭಾಗದಲ್ಲಿರುವ ಮಹರಾಣಿ ಮಹಿಳಾ ವಿಜ್ಞಾನ ಕಾಲೇಜಿನ ಗೋಡೆ ಶುಕ್ರವಾರ ಬೆಳಗ್ಗೆ 10 ಗಂಟೆ ಸುಮಾರಿಗೆ ಏಕಾಏಕಿ ಕುಸಿದು ಬಿದ್ದಿದೆ. ಈ ವೇಳೆ ಕಾಲೇಜಿನಲ್ಲಿ ವಿದ್ಯಾರ್ಥಿಗಳು ಪಾಠ ಕೇಳುತ್ತಿದ್ದು ಯಾರಿಗೂ ತೊಂದರೆ ಆಗಿಲ್ಲ ಎಂದು ತಿಳಿದುಬಂದಿದೆ.

ಗೋಡೆ ಕುಸಿಯುತ್ತಿದ್ದಂತೆ ಸಾರ್ವಜನಿಕರೊಬ್ಬರು ವೀಡಿಯೊ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟಿದ್ದಾರೆ.

Full View

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News