ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ತಾತ್ಕಾಲಿಕ ವೇಳಾಪಟ್ಟಿ ಪ್ರಕಟ

Update: 2022-10-21 14:06 GMT
ಸಾಂದರ್ಭಿಕ ಚಿತ್ರ

ಬೆಂಗಳೂರು, ಅ.21: ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ತಾತ್ಕಾಲಿಕ ವೇಳಾಪಟ್ಟಿಯನ್ನು ಪದವಿ ಪೂರ್ವ ಪರೀಕ್ಷಾ ಮಂಡಳಿ ಪ್ರಕಟಿಸಿದೆ. 

ಈ ಬಗ್ಗೆ ಟ್ವೀಟ್ ಮೂಲಕ ಮಾಹಿತಿ ನೀಡಿರುವ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ , '' 2023 ಸಾಲಿನ ದ್ವಿತೀಯ ಪಿಯು ಪರೀಕ್ಷೆಯ ವಾರ್ಷಿಕ ಪರೀಕ್ಷೆಯ ತಾತ್ಕಾಲಿಕ ವೇಳಾಟ್ಟಿಯನ್ನು  ದಿನಾಂಕ 10-3-2023ರಿಂದ 29-3-2023ರ ವರೆಗೆ ನಡೆಸಲು ಪಿಯು ಬೋರ್ಡ್ ತೀರ್ಮಾನಿಸಿದ್ದು, ಇಂದು(ಅಕ್ಟೋಬರ್ 21) ತಾತ್ಕಾಲಿಕ ವೇಳಾಪಟ್ಟಿಯನ್ನು ಪ್ರಕಟಿಸಿದೆ'' ಎಂದು ತಿಳಿಸಿದ್ದಾರೆ. 

►10-03-2023 ಕನ್ನಡ, ಅರೇಬಿಕ್

►11-03-2023 ಗಣಿತ ಶಾಸ್ತ್ರ, ಶಿಕ್ಷಣ ಶಾಸ್ತ್ರ

►13-03-2023 ಅರ್ಥಶಾಸ್ತ್ರ

►14-03-2023 ಕರ್ನಾಟಕ ಸಂಗೀತ, ಹಿಂದೂಸ್ತಾನಿ ಸಂಗೀತ, ಮನಶಾಸ್ತ್ರ, ರಸಾಯನಶಾಸ್ತ್ರ, ಮೂಲಗಣಿತ

►15-03-2023 ತಮಿಳು, ತೆಲುಗು, ಮಲಯಾಳಂ, ಮರಾಠಿ, ಉರ್ದು, ಸಂಸ್ಕೃತ, ಫ್ರೆಂಚ್

►16-03-2023 ತರ್ಕಶಾಸ್ತ್ರ, ವ್ಯವಹಾರ ಅಧ್ಯಯನ

►17-03-2023 ಮಾಹಿತಿ ತಂತ್ರಜ್ಞಾನ, ರೀಟೈಲ್, ಆಟೋಮೊಬೈಲ್, ಹೆಲ್ತ್ ಕೇರ್, ಬ್ಯೂಟಿ ಅಂಡ್ ವೆಲ್ ನೆಸ್

►18-03-2023 ಭೂಗೋಳಶಾಸ್ತ್ರ, ಜೀವಶಾಸ್ತ್ರ

►20-03-2023 ಇತಿಹಾಸ, ಭೌತಶಾಸ್ತ್ರ

► 21-03-2023 ಹಿಂದಿ

► 23-03-2023 ಇಂಗ್ಲೀಷ್

► 25-03-2023 ರಾಜ್ಯಶಾಸ್ತ್ರ, ಸಂಖ್ಯಾಶಾಸ್ತ್ರ

► 27-03-2023 ಐಚ್ಛಿಕ ಕನ್ನಡ, ಲೆಕ್ಕಶಾಸ್ತ್ರ, ಭೂಗರ್ಭಶಾಸ್ತ್ರ, ಗೃಹ ವಿಜ್ಞಾನ

► 29-03-2023 ಸಮಾಜ ಶಾಸ್ತ್ರ, ವಿದ್ಯುನ್ಮಾನಶಾಸ್ತ್ರ, ಗಣಕ ವಿಜ್ಞಾನ

-----------------------------------------------------------------------------

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News