×
Ad

ಭ್ರಷ್ಟಾಚಾರ ಪ್ರಕರಣ:ಮಹಾರಾಷ್ಟ್ರ ಮಾಜಿ ಸಚಿವ ಅನಿಲ್‌ ದೇಶ್‌ಮುಖ್‌ಗೆ ಜಾಮೀನು ನಿರಾಕರಣೆ

Update: 2022-10-21 21:22 IST

ಮುಂಬೈ,ಅ.21: ಭ್ರಷ್ಟಾಚಾರ ಮತ್ತು ಅಧಿಕಾರ ದುರುಪಯೋಗ ಪ್ರಕರಣದಲ್ಲಿ ಜಾಮೀನು ಕೋರಿ ಮಹಾರಾಷ್ಟ್ರದ ಮಾಜಿ ಗೃಹಸಚಿವ ಅನಿಲ್ ದೇಶಮುಖ್(Anil Deshmukh) ಸಲ್ಲಿಸಿದ್ದ ಅರ್ಜಿಯನ್ನು ಮುಂಬೈನ ವಿಶೇಷ ಸಿಬಿಐ ನ್ಯಾಯಾಲಯವು ಶುಕ್ರವಾರ ತಿರಸ್ಕರಿಸಿದೆ. ಸಿಬಿಐ(CBI) ಪ್ರಕರಣದ ತನಿಖೆಯನ್ನು ನಡೆಸುತ್ತಿದೆ.

ಜಾರಿ ನಿರ್ದೇಶನಾಲಯ(ಈ.ಡಿ.)ವು ದೇಶಮುಖ ವಿರುದ್ಧ ದಾಖಲಿಸಿದ್ದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಬಾಂಬೆ ಉಚ್ಚ ನ್ಯಾಯಾಲಯವು ಅ.4ರಂದು ಅವರಿಗೆ ಜಾಮೀನು ಮಂಜೂರು ಮಾಡಿತ್ತು. ಇದರ ಬೆನ್ನಲ್ಲೇ ಸಿಬಿಐ ಪ್ರಕರಣದಲ್ಲಿ ಜಾಮೀನು ಕೋರಿ ದೇಶಮುಖ ಅರ್ಜಿ ಸಲ್ಲಿಸಿದ್ದರು.

ಉಭಯ ಪಕ್ಷಗಳ ವಾದಗಳನ್ನು ಆಲಿಸಿದ ಬಳಿಕ ನ್ಯಾ.ಎಸ್.ಎಚ್.ಗಲ್ವಾನಿ ಅವರು ಜಾಮೀನು ಅರ್ಜಿಯನ್ನು ತಿರಸ್ಕರಿಸಿದರು.

ಎನ್ಸಿಪಿ ನಾಯಕ ದೇಶಮುಖ್ (71)ರನ್ನು 2021,ನ.2ರಂದು ಬಂಧಿಸಲಾಗಿದ್ದು,ಆಗಿನಿಂದಲೂ ನ್ಯಾಯಾಂಗ ಬಂಧನದಲ್ಲಿದ್ದಾರೆ. ಕೊರೊನರಿ ಆ್ಯಂಜಿಯೊಗ್ರಫಿಗಾಗಿ ಕಳೆದ ವಾರ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News