×
Ad

ಕಾಸರಗೋಡು: ಶಾಲಾ ವಿಜ್ಞಾನ ಮೇಳ ನಡೆಯುತ್ತಿದ್ದಾಗ ಚಪ್ಪರ ಕುಸಿದ ಪ್ರಕರಣ; ಆರು ಮಂದಿ ಸೆರೆ

Update: 2022-10-22 12:33 IST

ಕಾಸರಗೋಡು : ಮಂಜೇಶ್ವರ ಉಪ ಜಿಲ್ಲಾ ವಿಜ್ಞಾನ ಮೇಳ ನಡೆಯುತ್ತಿದ್ದ ಸಂದರ್ಭ ಚಪ್ಪರ ಕುಸಿದು 59 ಮಂದಿ ಗಾಯಗೊಂಡ ಪ್ರಕರಣಕ್ಕೆ ಸಂಬಂಧಪಟ್ಟಂತೆ ಆರು ಮಂದಿಯನ್ನು ಮಂಜೇಶ್ವರ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಚಪ್ಪರದ ಗುತ್ತಿಗೆದಾರ ಗೋಕುಲ್ ದಾಸ್, ಅಹ್ಮದಾಲಿ ಎ.ಪಿ, ಅಬ್ದುಲ್ ಬಶೀರ್, ಅಬ್ದುಲ್ ಶಾಮಿಲ್, ಇಲ್ಯಾಸ್ ಮುಹಮ್ಮದ್ ಮತ್ತು ಅಶ್ರಫ್ ಬಂಧಿತರು ಎಂದು ಪೊಲೀಸರು ತಿಳಿಸಿದ್ದಾರೆ.

ಶುಕ್ರವಾರ ಮಧ್ಯಾಹ್ನ ಬೇಕೂರು ಸರಕಾರಿ ಹಯರ್ ಸೆಕೆಂಡರಿ ಶಾಲೆಯಲ್ಲಿ ಘಟನೆ ನಡೆದಿತ್ತು. ಘಟನೆ ಬಗ್ಗೆ ತನಿಖೆ ನಡೆಸಿ ವರದಿ ನೀಡುವಂತೆ ಕೇರಳ ಶಿಕ್ಷಣ ಸಚಿವ  ಶಿವನ್ ಕುಟ್ಟಿ  ಆದೇಶ ನೀಡಿದ್ದಾರೆ.

ಗಾಯಗೊಂಡು ಮಂಗಳೂರು ಹಾಗೂ ಕಾಸರಗೋಡು ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿರುವ  15 ಮಂದಿ ಚೇತರಿಸಿ ಕೊಳ್ಳುತ್ತಿದ್ದಾರೆ ಎಂದು ಪೊಲೀಸರು ತಿಳಿಸಿದ್ದು, ಉಳಿದವರು ಚಿಕಿತ್ಸೆ ಪಡೆದು ಆಸ್ಪತ್ರೆಯಿಂದ ಬಿಡುಗಡೆ ಗೊಂಡಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News