10 ಲಕ್ಷ ಸಿಬ್ಬಂದಿ ನೇಮಕಾತಿ ಅಭಿಯಾನ 'ರೋಜ್‌ಗರ್ ಮೇಳ'ಕ್ಕೆ ಪ್ರಧಾನಿ ಮೋದಿ ಚಾಲನೆ

Update: 2022-10-22 07:27 GMT
 ಪ್ರಧಾನಿ ನರೇಂದ್ರ ಮೋದಿ (Photo: PTI)

ಹೊಸದಿಲ್ಲಿ: 100 ವರ್ಷಗಳ ನಿರುದ್ಯೋಗ  ಹಾಗೂ ಸ್ವಯಂ ಉದ್ಯೋಗದ ಸಮಸ್ಯೆಯನ್ನು 100 ದಿನಗಳಲ್ಲಿ ಪರಿಹರಿಸಲು ಸಾಧ್ಯವಿಲ್ಲ ಎಂದು 10 ಲಕ್ಷ ಸಿಬ್ಬಂದಿಗೆ ನೇಮಕಾತಿ ಅಭಿಯಾನಕ್ಕೆ ಶನಿವಾರ ವೀಡಿಯೊ ಕಾನ್ಫರೆನ್ಸ್ ಮೂಲಕ ಚಾಲನೆ ನೀಡಿದ ನಂತರ ಪ್ರಧಾನಿ ನರೇಂದ್ರ ಮೋದಿ (Prime Minister Narendra Modi)  ಹೇಳಿದ್ದಾರೆ.

ಕಳೆದ 8 ವರ್ಷಗಳಲ್ಲಿ ಉದ್ಯೋಗ, ಸ್ವಯಂ ಉದ್ಯೋಗಕ್ಕಾಗಿ ಸರಕಾರದ ಪ್ರಯತ್ನಗಳಲ್ಲಿ ರೋಜ್‌ಗಾರ್ ಮೇಳವು ಒಂದು ಪ್ರಮುಖ ಮೈಲಿಗಲ್ಲು ಎಂದು ಅವರು ಹೇಳಿದರು.

ಸರಕಾರವು ಉತ್ಪಾದನೆ, ಪ್ರವಾಸೋದ್ಯಮವನ್ನು ವಿಸ್ತರಿಸುವತ್ತ ಗಮನಹರಿಸುತ್ತಿದೆ. ಇದು  ಸಾಕಷ್ಟು ಉದ್ಯೋಗವನ್ನು ಸೃಷ್ಟಿಸುತ್ತದೆ ಎಂದು ಪ್ರಧಾನಿ ಮೋದಿ ಹೇಳಿದರು.

ಸಮಾರಂಭದಲ್ಲಿ ಹೊಸದಾಗಿ ಸೇರ್ಪಡೆಗೊಂಡ 75,000 ಮಂದಿಗೆ ನೇಮಕಾತಿ ಪತ್ರಗಳನ್ನು ವಿತರಿಸಲಾಗುವುದು.

ಪ್ರಧಾನಿ ಕಾರ್ಯಾಲಯದ (ಪಿಎಂಒ) ಹೇಳಿಕೆಯ ಪ್ರಕಾರ, ಯುವಕರಿಗೆ ಉದ್ಯೋಗಾವಕಾಶಗಳನ್ನು ಒದಗಿಸುವ ಮತ್ತು ನಾಗರಿಕರ ಕಲ್ಯಾಣವನ್ನು ಖಾತ್ರಿಪಡಿಸುವ ಪ್ರಧಾನ ಮಂತ್ರಿಯವರ ನಿರಂತರ ಬದ್ಧತೆಯನ್ನು ಪೂರೈಸುವ ನಿಟ್ಟಿನಲ್ಲಿ ಇದು ಮಹತ್ವದ ಹೆಜ್ಜೆಯಾಗಿದೆ.

"ಪ್ರಧಾನಿ ಅವರ ನಿರ್ದೇಶನದಂತೆ, ಎಲ್ಲಾ ಸಚಿವಾಲಯಗಳು ಮತ್ತು ಇಲಾಖೆಗಳು ಮಿಷನ್ ಮೋಡ್‌ನಲ್ಲಿ ಮಂಜೂರಾದ ಹುದ್ದೆಗಳ ಪೈಕಿ ಖಾಲಿ   ಹುದ್ದೆಗಳನ್ನು ಭರ್ತಿ ಮಾಡಲು ಕೆಲಸ ಮಾಡುತ್ತಿವೆ" ಎಂದು ಹೇಳಿಕೆ ತಿಳಿಸಿದೆ.

ದೇಶಾದ್ಯಂತ ಹೊಸದಾಗಿ ನೇಮಕಗೊಂಡವರು ಭಾರತ ಸರಕಾರದ 38 ಸಚಿವಾಲಯಗಳು/ಇಲಾಖೆಗಳಿಗೆ ಸೇರುತ್ತಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News