ಬೆಂಗಳೂರು | ವಿದ್ಯಾರ್ಥಿಗಳಿಗೆ ಅಶ್ಲೀಲ ವಿಡಿಯೋ ಕಳುಹಿಸಿದ ಆರೋಪ: ಉಪನ್ಯಾಸಕ ಅಮಾನತು
Update: 2022-10-22 16:11 IST
ಬೆಂಗಳೂರು: ವಿದ್ಯಾರ್ಥಿಗಳಿಗೆ ಅಶ್ಲೀಲ ವಿಡಿಯೋಗಳನ್ನು ಕಳುಹಿಸಿದ ಆರೋಪಕ್ಕೆ ಸಂಬಂಧಿಸಿ ಉಪನ್ಯಾಸಕನೋರ್ವನನ್ನು ಅಮಾನತುಗೊಳಿಸಿ ಖಾಸಗಿ ಶಿಕ್ಷಣ ಸಂಸ್ಥೆ ಆದೇಶ ಹೊರಡಿಸಿದೆ.
ನಗರದ ಖಾಸಗಿ ಶಿಕ್ಷಣ ಸಂಸ್ಥೆಯೊಂದರ ಮೆಕಾನಿಕಲ್ ಇಂಜಿನಿಯರಿಂಗ್ ವಿಭಾಗದ ಉಪನ್ಯಾಸಕ ಮಧುಸೂಧನ್ ಆಚಾರ್ಯ ವಿದ್ಯಾರ್ಥಿಗಳಿಗೆ ಸಾಮಾಜಿಕ ಜಾಲತಾಣ ಇನ್ಸ್ಟಾ ಗ್ರಾಮ್ ನಲ್ಲಿ ವೈಯಕ್ತಿಕವಾಗಿ ಅಶ್ಲೀಲ ವಿಡಿಯೋಗಳನ್ನ ಕಳುಹಿಸಿತ್ತಿರವ ಬಗ್ಗೆ ಆರೋಪ ಕೇಳಿಬಂದಿತ್ತು.
ಈ ಸಂಬಂಧ ಈಶಾನ್ಯ ವಿಭಾಗದ ಸೆನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಹಿನ್ನೆಲೆಯಲ್ಲಿ ಶಿಕ್ಷಣ ಸಂಸ್ಥೆ ಉಪನ್ಯಾಸಕನನ್ನು ಅಮಾನತು ಮಾಡಿ ಆದೇಶ ಹೊರಡಿಸಿದೆ.