×
Ad

ಉನ್ನತ ವ್ಯಾಸಂಗಕ್ಕೆ ಸಾಲ ಸೌಲಭ್ಯ: ಅರ್ಜಿ ಆಹ್ವಾನ

Update: 2022-10-22 18:57 IST

ಉಡುಪಿ : ಕರ್ನಾಟಕ ಒಕ್ಕಲಿಗ ಸಮುದಾಯ ಅಭಿವೃದ್ಧಿ ನಿಗಮದ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಒಕ್ಕಲಿಗ ಸಮುದಾಯದ ವಿದ್ಯಾರ್ಥಿಗಳಿಂದ ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಉನ್ನತ ವ್ಯಾಸಂಗಕ್ಕೆ ಶೈಕ್ಷಣಿಕ ಯೋಜನೆಯಡಿ ಸಾಲ ಸೌಲಭ್ಯ ಪಡೆಯಲು ಸೇವಾಸಿಂಧು ಪೋರ್ಟಲ್ ಮೂಲಕ ಗ್ರಾಮ ಒನ್, ಬೆಂಗಳೂರು ಒನ್ ಮತ್ತು ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ನವೆಂಬರ್ ೩೦ ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ವೆಬ್‌ಸೈಟ್: -https://kvcdc.karnataka.gov.in/-, ಇ-ಮೇಲ್: mdkvcdc@gmail.com, ದೂ.ಸಂಖ್ಯೆ: ೦೮೦-೨೯೯೦೪೨೬೮, ೦೮೨೦- ೨೫೭೪೮೮೨ನ್ನು ಸಂಪರ್ಕಿಸಬಹುದು ಎಂದು ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News