×
Ad

ಸೌದಿ ಯುವರಾಜ ಮುಹಮ್ಮದ್ ಬಿನ್ ಸಲ್ಮಾನ್ ಮುಂದಿನ ತಿಂಗಳು ಭಾರತಕ್ಕೆ ಭೇಟಿ: ವರದಿ

Update: 2022-10-23 14:59 IST
Photo:twitter

ಹೊಸದಿಲ್ಲಿ: ಸೌದಿ ಅರೇಬಿಯಾದ ಯುವರಾಜ ಹಾಗೂ  ಪ್ರಧಾನ ಮಂತ್ರಿ ಮುಹಮ್ಮದ್ ಬಿನ್ ಸಲ್ಮಾನ್ ಅವರು ನವೆಂಬರ್ ನಲ್ಲಿ ಇಂಡೋನೇಷ್ಯಾದ ಬಾಲಿಯಲ್ಲಿ ಜಿ 20 ಶೃಂಗಸಭೆಗೆ ತೆರಳುವ ಮಾರ್ಗದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಲು ಭಾರತಕ್ಕೆ ಭೇಟಿ ನೀಡಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಅವರು ನವೆಂಬರ್ 14 ರಂದು ಮುಂಜಾನೆ ಆಗಮಿಸುತ್ತಾರೆ ಹಾಗೂ  ಆ ದಿನ ಸಂಜೆ ಹೊರಡುತ್ತಾರೆ.

ಪ್ರಧಾನಿ ನರೇಂದ್ರ ಮೋದಿಯವರ ಆಹ್ವಾನದ ಮೇರೆಗೆ ಭೇಟಿ ನೀಡಲಿದ್ದು, ಅವರು ಸೆಪ್ಟೆಂಬರ್‌ನಲ್ಲಿ ವಿದೇಶಾಂಗ ಸಚಿವರ ಮೂಲಕ ಪತ್ರವನ್ನು ಕಳುಹಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News