ಎಸ್ಸಿ-ಎಸ್ಟಿ ಮೀಸಲಾತಿ ಹೆಚ್ಚಳ ಸುಗ್ರಿವಾಜ್ಞೆಗೆ ರಾಜ್ಯಪಾಲರ ಅಂಕಿತ

Update: 2022-10-23 17:14 GMT
ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್

ಬೆಂಗಳೂರು: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗಕ್ಕೆ ಶಿಕ್ಷಣ ಮತ್ತು ಉದ್ಯೋಗದಲ್ಲಿ ಮೀಸಲಾತಿ ಹೆಚ್ಚಿಸುವ ಸಂಬಂಧದ ಸುಗ್ರೀವಾಜ್ಞೆಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಅಂಕಿತ ಹಾಕಿದ್ದಾರೆ.

ನ್ಯಾ. ನಾಹಮೋಹನದಾಸ್ ಅವರ ಶಿಫಾರಸ್ಸನ್ನು ಒಪ್ಪಿ ಸುಗ್ರೀವಾಜ್ಞೆ ಮಾಡಲು ಸಚಿವ ಸಂಪುಟ ತೀರ್ಮಾನ ತೆಗೆದುಕೊಂಡಿದ್ದು, ರಾಜ್ಯಪಾಲರು ಒಪ್ಪಿಗೆ ಸೂಚಿಸಿರುವುದು ಸಂತಸದ ಸಂಗತಿ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ರವಿವಾರ ಅಧಿಕೃತವಾದ ವಿಶೇಷ ರಾಜ್ಯಪತ್ರವನ್ನು ಪ್ರಕಟಿಸಲಾಗಿದೆ. ಇದರಿಂದ ಇನ್ನು ಮುಂದೆ ಅನುಸೂಚಿತ ಜಾತಿಯ ಮೀಸಲಾತಿ ಪ್ರಮಾಣ ಶೇ. 15 ರಿಂದ 17ಕ್ಕೆ ಏರಲಿದ್ದು, ಅನುಸೂಚಿತ ಪಂಗಡಗಳ ಮೀಸಲಾತಿ ಪ್ರಮಾಣ ಶೇ. 3ರಿಂದ 7 ಕ್ಕೆ ಏರಿಸಲಾಗಿದೆ. 

ನಮ್ಮ ಸರಕಾರವು ಮೀಸಲಾತಿ ಪ್ರಮಾಣ ಹೆಚ್ಚಿಸಿ ಬದ್ದತೆಯಿದ ನಡೆದುಕೊಂಡಿದೆ. ಈ ಮೂಲಕ ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಜನಾಂಗಕ್ಕೆ ಸರಕಾರ ದೀಪಾವಳಿ ಕೊಡುಗೆ ಕೊಟ್ಟಿದೆ ಎಂದು ತಿಳಿಸಿದ್ದಾರೆ.

ರಾಜ್ಯ ಸರ್ಕಾರದ ಸುಗ್ರೀವಾಜ್ಞೆಗೆ ಅಂಕಿತ ಹಾಕಿರುವ ರಾಜ್ಯಪಾಲರಿಗೆ ನಾನು ಕೃತಜ್ಞತೆ ಸಲ್ಲಿಸುತ್ತೇನೆ. ಈ ಆಧ್ಯಾದೇಶಕ್ಕೆ ವಿಧಾನ ಮಂಡಲದ ಎರಡೂ ಸದನದಲ್ಲಿ ಮಂಡಿಸಿ ಒಪ್ಪಿಗೆ ಪಡೆಯಲಾಗುವುದು ಎಂದು ಬಸವರಾಜ ಬೊಮ್ಮಾಯಿಯವರು ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News