ಕೇರಳ: 9 ವಿ.ವಿ.ಗಳ ಉಪ ಕುಲಪತಿಗಳ ರಾಜೀನಾಮೆಗೆ ರಾಜ್ಯಪಾಲರ ನಿರ್ದೇಶ

Update: 2022-10-23 17:52 GMT

ತಿರುವನಂತಪುರ, ಅ. 23: ಸುಪ್ರೀಂ ಕೋರ್ಟ್‌ನ ತೀರ್ಪಿನಂತೆ ಕೇರಳದ ರಾಜ್ಯಪಾಲ ಆರಿಫ್ ಮುಹಮ್ಮದ್ ಖಾನ್ 9 ವಿಶ್ವವಿದ್ಯಾನಿಲಯಗಳ ರಾಜ್ಯಪಾಲರಿಗೆ ರಾಜೀನಾಮೆ ನೀಡುವಂತೆ ನಿರ್ದೇಶನ ನೀಡಿದ್ದಾರೆ ಎಂದು ಕೇರಳ ರಾಜಭವನದ ಸಾರ್ವಜನಿಕ ಸಂಪರ್ಕ ಅಧಿಕಾರಿ ತಿಳಿಸಿದ್ದಾರೆ. 

ಕೇರಳದ 9 ವಿಶ್ವವಿದ್ಯಾನಿಲಯಗಳ ಉಪ ಕುಲಪತಿಗಳು ಅಕ್ಟೋಬರ್ 24ರಂದು ಬೆಳಗ್ಗೆ 11.30ರ ಒಳಗೆ ರಾಜೀನಾಮೆ ನೀಡುವಂತೆ ನಿರ್ದೇಶಿಸಿ ಪತ್ರ ನೀಡಲಾಗಿದೆ. ಈ ಪತ್ರಗಳನ್ನು ವಿಶ್ವವಿದ್ಯಾನಿಲಯಗಳ ಉಪ ಕುಲಪತಿಗಳು ಹಾಗೂ ರಿಜಿಸ್ಟ್ರಾರ್‌ಗೆ ಇಮೇಲ್ ಮಾಡಲಾಗಿದೆ.

ಕೇರಳದ ಈ 9 ವಿಶ್ವವಿದ್ಯಾನಿಲಯಗಳೆಂದರೆ ಕೇರಳ ವಿಶ್ವವಿದ್ಯಾನಿಲಯ, ಮಹಾತ್ಮಾ ಗಾಂಧಿ ವಿಶ್ವವಿದ್ಯಾನಿಲಯ, 3 ಕೊಚ್ಚಿನ್‌ವಿಜ್ಞಾನ ಹಾಗೂ ತಂತ್ರಜ್ಞಾನ ವಿಶ್ವವಿದ್ಯಾನಿಲಯ,  ಕೇರಳ ಮೀನುಗಾರಿಕೆ ಹಾಗೂ ಸಾಗರ ಅಧ್ಯಯನಗಳ ವಿಶ್ವವಿದ್ಯಾನಿಲಯ, ಎಪಿಜೆ ಅಬ್ದುಲ್ ಕಲಾಂ ತಾಂತ್ರಿಕ ವಿಶ್ವವಿದ್ಯಾನಿಲಯ, ಶ್ರೀ ಶಂಕರಾಚಾರ್ಯ ಸಂಸ್ಕೃತ ವಿಶ್ವವಿದ್ಯಾನಿಲಯ, ಕೋಝಿಕ್ಕೋಡ್ ವಿಶ್ವವಿದ್ಯಾನಿಲಯ ಹಾಗೂ ತುಂಜತ್ತ್ ಎಳುತಚ್ಚನ್ ಮಲೆಯಾಳಂ ವಿಶ್ವವಿದ್ಯಾನಿಲಯ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News