ಸುಳ್ಯ: ತಲೆಗೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಯತ್ನ; ದೂರು ದಾಖಲು
Update: 2022-10-24 16:35 IST
ಸುಳ್ಯ: ನಗರದ ಜಟ್ಟಿಪಳ್ಳ ಬೊಳಿಯಮಜಲಿನ ಕೇಶವ ಪ್ರಭು (60) ಎಂಬವರು ತಲೆಗೆ ಪಿಸ್ತೂಲಿನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎನ್ನಲಾಗಿದ್ದು, ಗಂಭೀರ ಗಾಯಗೊಂಡಿರುವ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಸುಳ್ಯ ನಗರ ಪಂಚಾಯತ್ ಮಾಜಿ ಉಪಾಧ್ಯಕ್ಷೆ ಶಾಂತಿ ಪ್ರಭು ಅವರ ಪತಿ ಕೇಶವ ಪ್ರಭು ಮನೆಯಲ್ಲಿ ಒಬ್ಬರೇ ಇದ್ದರು ಎನ್ನಲಾಗಿದ್ದು, ಈ ಸಂದರ್ಭ ಘಟನೆ ನಡೆದಿದೆ.
ತಲೆಗೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಯತ್ನಿಸಿರಬೇಕು ಎಂದು ಪೊಲೀಸರು ಶಂಕಿಸಿದ್ದಾರೆ. ಬೆಳಗ್ಗೆ 11 ಗಂಟೆಯ ಸುಮಾರಿಗೆ ವಿಷಯ ತಿಳಿದ ಸ್ಥಳೀಯರು ಅವರನ್ನು ಸುಳ್ಯ ಆಸ್ಪತ್ರೆಗೆ ಸಾಗಿಸಿದ್ದಾರೆ.
ಈ ಬಗ್ಗೆ ಇಲ್ಲಿನ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.