ಬೆಂಗಳೂರು: ಮೇಲ್ಸೇತುವೆಯಿಂದ ಬಿದ್ದು ಬೈಕ್ ಸವಾರ ಮೃತ್ಯು
Update: 2022-10-24 18:24 IST
ಬೆಂಗಳೂರು, ಅ.24: ಇಲ್ಲಿನ ಎಲೆಕ್ಟ್ರಾನಿಕ್ ಸಿಟಿ (Electronic City) ಮೇಲ್ಸೇತುವೆಯಿಂದ (flyover) ಕೆಳಕ್ಕೆ ಬಿದ್ದ ಬೈಕ್ ಸವಾರನೋರ್ವ ಮೃತಪಟ್ಟಿರುವ ಘಟನೆ ವರದಿಯಾಗಿದೆ.
ಆಂಧ್ರ ಪ್ರದೇಶ ಮೂಲದ ಕೊರೆ ನಾಗರಾಜು(33) ಮೃತ ಬೈಕ್ ಸವಾರ ಎಂದು ಪೊಲೀಸರು ಗುರುತಿಸಿದ್ದಾರೆ.
ಮೇಲ್ಸೇತುವೆಯ ಇಳಿಜಾರಿನ ತಿರುವಿನಲ್ಲಿ ನಿಯಂತ್ರಣ ತಪ್ಪಿ ಕೆಳಗೆ ಬಿದ್ದ ಪರಿಣಾಮ ಸವಾರ ಸ್ಥಳದಲ್ಲಿಯೇ ಸಾವನಪ್ಪಿದ್ದಾರೆ ಎಂದು ತಿಳಿದು ಬಂದಿದೆ.
ಸ್ಥಳಕ್ಕೆ ಬಿಇಟಿಎಲ್ ಹಾಗೂ ಎಲೆಕ್ಟ್ರಾನಿಕ್ ಸಿಟಿ ಸಂಚಾರ ವಿಭಾಗದ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.