ಚಿತ್ರದುರ್ಗ: ರೋಡ್ ಡಿವೈಡರ್‌ಗೆ ಕಾರು ಢಿಕ್ಕಿ; ಮೂವರು ಸ್ಥಳದಲ್ಲೇ ಮೃತ್ಯು

Update: 2022-10-25 03:55 GMT

ಚಿತ್ರದುರ್ಗ : ರೋಡ್ ಡಿವೈಡರ್‌ಗೆ ಕಾರೊಂದು ಢಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಮೃತಪಟ್ಟು, ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಗರದ ಪ್ರವಾಸಿ ಮಂದಿರ ಬಳಿ ತಡರಾತ್ರಿ ನಡೆದಿದೆ.

ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದು, ಮೃತರ ಗುರುತು ಪತ್ತೆಯಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

ಗಾಯಾಳುಗಳನ್ನು ಇಲ್ಲಿನ ಜಿಲ್ಲಾ ಆಸ್ಪತ್ರೆಗೆ ಸೇರಿಸಲಾಗಿದ್ದು, ಬೆಂಗಳೂರು ಮೂಲದ ಕಾರು ಎಂದು ತಿಳಿದುಬಂದಿದೆ.

ಈ ಬಗ್ಗೆ ಚಿತ್ರದುರ್ಗ ಸಂಚಾರಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News