×
Ad

ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷರನ್ನಾಗಿ ನಾಗಣ್ಣಗೌಡ ನೇಮಕ

Update: 2022-10-25 20:15 IST

ಬೆಂಗಳೂರು, ಅ. 25: ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷರನ್ನಾಗಿ ತಕ್ಷಣದಿಂದಲೇ ಜಾರಿಗೆ ಬರುವಂತೆ ಮಂಡ್ಯ ಮೂಲದ ಕೆ.ನಾಗಣ್ಣ ಗೌಡ ಅವರನ್ನು ನೇಮಕ ಮಾಡಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ.

ಕೇಂದ್ರ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧಿನಿಯಮ 2005ರ ಪರಿಚ್ಛೇಧ 18ರ ಅನ್ವಯ ಹಾಗೂ ರಾಜ್ಯ ಮಕ್ಕಳ ಹಕ್ಕುಗಳ ಆಯೋಗದ ನಿಯಮ 2010ರ ನಿಯಮ 3ರಲ್ಲಿ ಪ್ರದತ್ತವಾದ ಅಧಿಕಾರ ಚಲಾಯಿಸಿ ನಾಗಣ್ಣಗೌರ ಅವರನ್ನು ಆಯೋಗದ ಅಧ್ಯಕ್ಷರನ್ನಾಗಿ ಮುಂದಿನ 3ವರ್ಷಗಳ ಅವಧಿಗೆ ನೇಮಕ ಮಾಡಲಾಗಿದೆ ಎಂದು ಮಹಿಳೆ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅಧೀನ ಕಾರ್ಯದರ್ಶಿ ಕೇಶವ ಪ್ರಸಾದ್ ಕೆ.ಎಚ್. ಆದೇಶ ಹೊರಡಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News