ಬುಧವಾರ ಮಲ್ಲಿಕಾರ್ಜುನ ಖರ್ಗೆ ಕಾಂಗ್ರೆಸ್‌ನ ನೂತನ ಅಧ್ಯಕ್ಷರಾಗಿ ಅಧಿಕಾರ ಸ್ವೀಕಾರ

Update: 2022-10-25 15:44 GMT

ಹೊಸದಿಲ್ಲಿ, ಅ. 25:  ಕಾಂಗ್ರೆಸ್‌ನ ನೂತನ ಅಧ್ಯಕ್ಷರಾಗಿ ಮಲ್ಲಿಕಾರ್ಜುನ ಖರ್ಗೆ ಅವರು ಅಕ್ಟೋಬರ್ 26ರಂದು ಅಧಿಕಾರ ಸ್ವೀಕರಿಸಲಿದ್ದಾರೆ. ಹೊಸದಿಲ್ಲಿಯಲ್ಲಿರುವ ಕಾಂಗ್ರೆಸ್‌ನ ಕೇಂದ್ರ ಕಚೇರಿಯಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಪಕ್ಷದ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಮಲ್ಲಿಕಾರ್ಜುನ ಖರ್ಗೆ ಅವರಿಗೆ ಅಧಿಕಾರ ಹಸ್ತಾಂತರಿಸಲಿದ್ದಾರೆ. 

ಇದರೊಂದಿಗೆ 24 ವರ್ಷಗಳ ಬಳಿಕ ಗಾಂಧಿ ಕುಟುಂಬದಿಂದ ಹೊರತಾದ ವ್ಯಕ್ತಿಯೊಬ್ಬರು ಕಾಂಗ್ರೆಸ್‌ನ ಚುಕ್ಕಾಣಿ ಹಿಡಿಯುವಂತಾಗಲಿದೆ. ಕಾರ್ಯಕ್ರಮದಲ್ಲಿ ಕಾಂಗ್ರೆಸ್‌ನ ಕೇಂದ್ರ ಚುನಾವಣಾ ಪ್ರಾಧಿಕಾರದ ಅಧ್ಯಕ್ಷ  ಮಧುಸೂದನ ಮಿಸ್ತ್ರಿ ಅವರು ಚುನಾವಣಾ ಪ್ರಮಾಣ ಪತ್ರವನ್ನು ಮಲ್ಲಿಕಾರ್ಜುನ ಖರ್ಗೆ ಅವರಿಗೆ ಔಪಚಾರಿಕವಾಗಿ ಹಸ್ತಾಂತರಿಸಲಿದ್ದಾರೆ.
ಈ ಸಂದರ್ಭ ನಾಯಕ ರಾಹುಲ್ ಗಾಂಧಿ ಹಾಗೂ ಇತರ ಗಣ್ಯರು ಉಪಸ್ಥಿತರಿರಲಿದ್ದಾರೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News