ಗುಜರಾತ್‌ ಸಿಎಂ ಭೂಪೇಂದ್ರ ಪಟೇಲ್‌ಗೆ ಪ್ರಧಾನಿ ಮೋದಿಯಿಂದ ಅವಮಾನ ಆರೋಪ: ಸಾಮಾಜಿಕ ತಾಣದಲ್ಲಿ ಆಕ್ರೋಶ

Update: 2022-10-25 16:40 GMT
Photo: Twitter Video Screengrab

ಅಹಮದಾಬಾದ್: ಮುಂಬರುವ ಗುಜರಾತ್ ಅಸೆಂಬ್ಲಿ ಚುನಾವಣಾ ಪ್ರಚಾರದಲ್ಲಿ ತೊಡಗಿರುವ  ಪ್ರಧಾನಿ ಮೋದಿ ಅವರು ಪ್ರಸ್ತುತ ಗುಜರಾತ್ ಮುಖ್ಯಮಂತ್ರಿ ಭೂಪೇಂದ್ರ  ಪಟೇಲ್ ಅವರನ್ನು ಕಾರಿಗೆ ಹತ್ತಿಸದೆ ನಡೆಯುವಂತೆ ಮಾಡುವ ಮೂಲಕ ಅವಮಾನ ಮಾಡಿದ್ದಾರೆ ಎಂದು ರಾಜ್ಯ ಕಾಂಗ್ರೆಸ್ ಆರೋಪಿಸಿದೆ.

ಜನರೆಡೆಗೆ ಕೈ ಬೀಸುತ್ತಾ ಕಾರನ್ನು ಏರಲು ಭೂಪೇಂದ್ರ ಪಟೇಲ್ ಅವರು ಪ್ರಯತ್ನಿಸುತ್ತಿದ್ದರೂ, ಕಾರನ್ನು ನಿಲ್ಲಿಸದೆ ಮುಂದಕ್ಕೆ ಕೊಂಡೊಯ್ಯುವ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಪ್ರಧಾನಿ ಮೋದಿ ವಿರುದ್ಧ ಆಕ್ಷೇಪ ವ್ಯಕ್ತವಾಗುತ್ತಿದೆ. 

"ಮುಖ್ಯಮಂತ್ರಿಗೆ ಅವಮಾನ ಮಾಡಲಾಗಿದ್ದು, ರಾಜ್ಯದ ಮುಖ್ಯಮಂತ್ರಿ ಜೊತೆ ಈ ರೀತಿ ವರ್ತಿಸುವುದು ಆಕ್ಷೇಪಾರ್ಹ. ಇದು ಮುಖ್ಯಮಂತ್ರಿ ಹುದ್ದೆಗೆ ಮತ್ತು ಗುಜರಾತ್ ಜನರಿಗೆ ಮಾಡಿದ ಅವಮಾನ" ಎಂದು ಪ್ರತಿಪಕ್ಷ ಕಾಂಗ್ರೆಸ್ ವಕ್ತಾರರಾದ ಶಮಾ ಮುಹಮ್ಮದ್ ಆಕ್ರೋಶ ಹೊರಹಾಕಿದ್ದಾರೆ. ರಾಜ್ಯದ ಮುಖ್ಯಮಂತ್ರಿಯನ್ನು ಈ ರೀತಿ ನಡೆಸಿಕೊಳ್ಳುವುದಾದರೆ ಸಾಮಾನ್ಯ ಪ್ರಜೆಗಳ ಪಾಡೇನು ಎಂದು ಅವರು ಪ್ರಶ್ನಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News