×
Ad

ಮಂಗಳೂರು: ಪವಿತ್ರ ಮೃತ್ತಿಕೆ (ಮಣ್ಣು) ಸಂಗ್ರಹ ಅಭಿಯಾನಕ್ಕೆ ಚಾಲನೆ

Update: 2022-10-26 12:13 IST

ಮಂಗಳೂರು: ಬೆಂಗಳೂರಿನಲ್ಲಿ ನಾಡಪ್ರಭು ಕೆಂಪೇಗೌಡ ಅವರ 108 ಅಡಿ ಎತ್ತರದ ಕಂಚಿನ ಪ್ರತಿಮೆ ಉದ್ಘಾಟನೆಗೊಳ್ಳಲಿರುವ ಹಿನ್ನೆಲೆಯಲ್ಲಿ ಪವಿತ್ರ ಮೃತ್ತಿಕೆ (ಮಣ್ಣು ಸಂಗ್ರಹ) ಅಭಿಯಾನಕ್ಕೆ ನಗರದ ಬ್ರಹ್ಮಶ್ರೀ ನಾರಾಯಣ ಗುರು ವೃತ್ತದ ಬಳಿಯಿರುವ ಮಂಗಳೂರು ಮಹಾನಗರ ಪಾಲಿಕೆಯ ಈಜುಕೊಳದ ಆವರಣದಲ್ಲಿ ಇಂದು ಚಾಲನೆ ನೀಡಲಾಯಿತು.

ಈ ಸಂದರ್ಭ ದ.ಕ.ಜಿಲ್ಲೆ ಪ್ರವೇಶಿಸಿದ ಕೆಂಪೇಗೌಡ ರಥಕ್ಕೆ ಸ್ವಾಗತ ಕೋರಲಾಯಿತು. ಪವಿತ್ರ ಮೃತ್ತಿಕೆ ಸಂಗ್ರಹ ಅಭಿಯಾನವು ನವೆಂಬರ್ 7ರವರೆಗೆ ರಾಜ್ಯಾದ್ಯಂತ ನಡೆಯಲಿದೆ.

ದ.ಕ. ಜಿಲ್ಲಾ ಉಸ್ತುವಾರಿ ಸಚಿವ ವಿ. ಸುನಿಲ್ ಕುಮಾರ್, ಸಂಸದ ನಳಿನ್ ಕುಮಾರ್ ಕಟೀಲ್, ಶಾಸಕರಾದ ವೇದವ್ಯಾಸ ಕಾಮತ್, ಡಾ. ಭರತ್ ಶೆಟ್ಟಿ, ಸಂಜೀವ ಮಠಂದೂರು, ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ಮಂಗಳೂರು ಮೇಯರ್ ಜಯಾನಂದ ಅಂಚನ್, ಉಪ ಮೇಯರ್ ಪೂರ್ಣಿಮ, ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ., ಜಿಪಂ ಸಿಇಒ ಡಾ. ಕುಮಾರ್,ಆದಿ ಚುಂಚನಗಿರಿ ಶಾಖಾ ಮಠದ ಡಾ. ಧರ್ಮಪಾಲನಾ ಸ್ವಾಮೀಜಿ ಮತ್ತಿತರರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News