×
Ad

'ಬೆಂಗಳೂರನ್ನು ಹಾಗೂ ಕಾನೂನನ್ನು ಬಿಜೆಪಿ ಗುತ್ತಿಗೆ ಪಡೆದಿದೆಯೇ?': ಅನಧಿಕೃತ ಬ್ಯಾನರ್‌ ತೆರವಿಗೆ ಕಾಂಗ್ರೆಸ್ ಆಗ್ರಹ

Update: 2022-10-26 14:34 IST

ಕಾನೂನು ರಾಜಕೀಯ ದ್ವೇಷಕ್ಕೆ ಬಳಸಿಕೊಳ್ಳಲು ಮಾತ್ರ ಇರುವುದೇ @BSBommai ಅವರೇ?

ಕಾಂಗ್ರೆಸ್ ಬ್ಯಾನರ್‌ಗಳಿಗೆ ತಾವು ತೋರುವ ವೀರಾವೇಶ ನಿಮ್ಮ ಪಕ್ಷದವರ ಬ್ಯಾನರ್‌ಗಳಿಗೆ ತೋರುತ್ತಿಲ್ಲವೇಕೆ?
ಬೆಂಗಳೂರನ್ನು ಹಾಗೂ ಕಾನೂನನ್ನು ಬಿಜೆಪಿ ಪಕ್ಷ ಗುತ್ತಿಗೆ ಪಡೆದಿದೆಯೇ?@BBMPCOMM ಅವರೇ, ಕ್ರಮ ಕೈಗೊಂಡು ತಮ್ಮ ನಿಷ್ಪಕ್ಷಪಾತವನ್ನು ನಿರೂಪಿಸಿ. pic.twitter.com/BJvfcwWzaL

— Karnataka Congress (@INCKarnataka) October 26, 2022

ಬೆಂಗಳೂರು, ಅ.26: 'ಬಿಬಿಎಂಪಿ ವ್ಯಾಪ್ತಿಯಲ್ಲಿ ಫ್ಲೆಕ್ಸ್, ಬ್ಯಾನರ್‌ಗಳಿಗೆ ನಿಷೇಧವಿದ್ದರೂ ಬೆಂಗಳೂರಿನಾದ್ಯಂತ 5, 000ಕ್ಕೂ ಹೆಚ್ಚು ಬಿಜೆಪಿ ಪಕ್ಷದ ಅನಧಿಕೃತ ಬ್ಯಾನರ್‌ಗಳನ್ನು ಹಾಕಲಾಗಿದೆ ಎಂದು ಆರೋಪಿಸಿರುವ ಕಾಂಗ್ರೆಸ್, 'ಬಿಜೆಪಿ ನಾಯಕರ ವಿರುದ್ಧ ಪ್ರಕರಣ ದಾಖಲಿಸಲಿಲ್ಲವೇಕೆ? ಬ್ಯಾನರ್‌ಗಳನ್ನು ತೆರವು ಮಾಡಲಿಲ್ಲ ಏಕೆ?' ಎಂದು  ಬಿಬಿಎಂಪಿ ಆಯುಕ್ತರು ಮತ್ತು ಪೊಲೀಸ್ ಆಯುಕ್ತರನ್ನು ಪ್ರಶ್ನೆ ಮಾಡಿದೆ.  

ಈ ಸಂಬಂಧ ಟ್ವೀಟ್ ಮಾಡಿರುವ ಕಾಂಗ್ರೆಸ್, 'ಕಾನೂನು ಬಿಜೆಪಿಗೇ ಬೇರೆ, ಇತರರಿಗೆ ಬೇರೆ ಇದೆಯೇ?' ಎಂದು ಕಿಡಿಕಾರಿದೆ.

''ಕಾನೂನು ರಾಜಕೀಯ ದ್ವೇಷಕ್ಕೆ ಬಳಸಿಕೊಳ್ಳಲು ಮಾತ್ರ ಇರುವುದೇ ಬಸವರಾಜ ಬೊಮ್ಮಾಯಿ ಅವರೇ? ಕಾಂಗ್ರೆಸ್ ಬ್ಯಾನರ್‌ಗಳಿಗೆ ತಾವು ತೋರುವ ವೀರಾವೇಶ ನಿಮ್ಮ ಪಕ್ಷದವರ ಬ್ಯಾನರ್‌ಗಳಿಗೆ ತೋರುತ್ತಿಲ್ಲವೇಕೆ? ಬೆಂಗಳೂರನ್ನು ಹಾಗೂ ಕಾನೂನನ್ನು ಬಿಜೆಪಿ ಪಕ್ಷ ಗುತ್ತಿಗೆ ಪಡೆದಿದೆಯೇ?'' ಎಂದು ಪ್ರಶ್ನೆ ಮಾಡಿದೆ. 

''ಬಿಬಿಎಂಪಿ ಆಯುಕ್ತರೇ, ಕ್ರಮ ಕೈಗೊಂಡು ತಮ್ಮ ನಿಷ್ಪಕ್ಷಪಾತವನ್ನು ನಿರೂಪಿಸಿ'' ಎಂದು ಆಗ್ರಹಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News