ಅ.31: ಪಟ್ಲ ಘಟಕದ ಪದಗ್ರಹಣ - ವಾರ್ಷಿಕ ಸಂಭ್ರಮ
ಮಂಗಳೂರು: ನಗರದ ಪುರಭವನದಲ್ಲಿ ಅ.31ರಂದು ಜರಗಲಿರುವ ಯಕ್ಷಧ್ರುವ ಪಟ್ಲ ಫೌಂಡೇಶನ್ ಮಂಗಳೂರು ನಗರ ಘಟಕದ ಪದಗ್ರಹಣ ಮತ್ತು 4ನೇ ವಾರ್ಷಿಕ ಸಮಾರಂಭದ ಆಮಂತ್ರಣ ಪತ್ರಿಕೆಯ ಬಿಡುಗಡೆ ಕಾರ್ಯಕ್ರಮವು ನಗರದಲ್ಲಿ ಇತ್ತೀಚೆಗೆ ನಡೆಯಿತು.
ಎಚ್‌ಎಂಎಸ್ ಸಂಘಟನೆಯ ರಾಷ್ಟ್ರೀಯ ಉಪಾಧ್ಯಕ್ಷ ಸುರೇಶ್ಚಂದ್ರ ಶೆಟ್ಟಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ ದರು. ಮಹೇಶ್ ಮೋಟಾರ್ ಮಾಲಕ ಜಯರಾಮ ಶೇಖ ಕಾರ್ಯಕ್ರಮ ಉದ್ಘಾಟಿಸಿದರು.
ಮಂಗಳಾದೇವಿ ಲಯನ್ಸ್ ಕ್ಲಬ್ ಅಧ್ಯಕ್ಷ ಅನಿಲ್‌ದಾಸ್ ಆಮಂತ್ರಣ ಪತ್ರಿಕೆ ಬಿಡುಗಡೆ ಮಾಡಿದರು. ಕೇಂದ್ರೀಯ ಸಮಿತಿಯ ಪ್ರಧಾನ ಕಾರ್ಯದರ್ಶಿ ಅಡ್ಯಾರ್ ಪುರುಷೋತ್ತಮ ಭಂಡಾರಿ ಹಾಗೂ ಉದ್ಯಮಿ ನಿತ್ಯಾನಂದ ಶೆಟ್ಟಿ ಶುಭಕೋರಿದರು.
ವೇದಿಕೆಯಲ್ಲಿ ಕೇಂದ್ರೀಯ ಸಮಿತಿಯ ಕೋಶಾಧಿಕಾರಿ ಸುದೇಶ್ ಕುಮಾರ್ ರೈ, ಮಹಿಳಾ ಘಟಕದ ಗೌರವಾಧ್ಯಕ್ಷೆ ಆರತಿ ಆಳ್ವ, ಮಂಗಳೂರು ಘಟಕದ ಸಂಚಾಲಕ ನಿಟ್ಟೆಗುತ್ತು ರವಿರಾಜ್ ಶೆಟ್ಟಿ, ಮಂಗಳೂರು ಘಟಕದ ಅಧ್ಯಕ್ಷ ಪ್ರದೀಪ್ ಆಳ್ವ ಕದ್ರಿ, ನಿಯೋಜಿತ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಉಪಸ್ಥಿತರಿದ್ದರು.
ಘಟಕದ ಕೋಶಾಧಿಕಾರಿ ರವಿ ಶೆಟ್ಟಿ ಅಶೋಕನಗರ ವಂದಿಸಿದರು. ಕಾರ್ಯದರ್ಶಿ ಕೃಷ್ಣ ಶೆಟ್ಟಿ ತಾರೆಮಾರ್ ಕಾರ್ಯಕ್ರಮ ನಿರೂಪಿಸಿದರು.