×
Ad

ST ಮೀಸಲಾತಿ ಹೆಚ್ಚಳ ಹಿನ್ನೆಲೆ; ಸಿದ್ದರಾಮಯ್ಯರನ್ನು ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಪ್ರಸನ್ನಾನಂದಪುರಿ ಸ್ವಾಮೀಜಿ

Update: 2022-10-27 12:21 IST

ಬೆಂಗಳೂರು: ವಾಲ್ಮೀಕಿ ಸಮುದಾಯದ ಎಸ್.ಟಿ ಮೀಸಲಾತಿ ಪ್ರಮಾಣ ಹೆಚ್ಚಳಗೊಂಡ ಹಿನ್ನೆಲೆಯಲ್ಲಿ ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರನ್ನು ವಾಲ್ಮಿಕಿ ಪೀಠದ ಪ್ರಸನ್ನಾನಂದಪುರಿ ಸ್ವಾಮೀಜಿ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದರು. 

ಮೀಸಲಾತಿ ಪ್ರಮಾಣ ಹೆಚ್ಚಳಕ್ಕೆ ಕಾಂಗ್ರೆಸ್ - ಜೆಡಿಎಸ್ ಮೈತ್ರಿ ಸರಕಾರದ ಸಂದರ್ಭದಲ್ಲಿ ನ್ಯಾಯಮೂರ್ತಿ ನಾಗಮೋಹನ್ ದಾಸ್ ನೇತೃತ್ವದ ಸಮಿತಿ ರಚನೆ ಮಾಡಲಾಗಿತ್ತು. ಈ ಹಿನ್ನೆಲೆಯಲ್ಲಿ ಗುರುವಾರ ಸಿದ್ದರಾಮಯ್ಯ ಅವರ ಸರಕಾರಿ ನಿವಾಸಕ್ಕೆ ಭೇಟಿ ನೀಡಿದ  ಪ್ರಸನ್ನಾನಂದಪುರಿ ಸ್ವಾಮೀಜಿ ಅವರ ನೇತೃತ್ವದ ನಿಯೋಗವು, ಸಿದ್ದರಾಮಯ್ಯಗೆ ಸಿಹಿ ತಿನ್ನಿಸಿ, ಅಭಿನಂದನೆ ಸಲ್ಲಿಸಿದೆ.  

ಈ ಸಂಬಧ ಟ್ವೀಟ್ ಮಾಡಿರುವ ಸಿದ್ದರಾಮಯ್ಯ, ' ಸಾಮಾಜಿಕ ನ್ಯಾಯ ಸ್ಥಾಪನೆಯಾಗಬೇಕಾದರೆ ಶೋಷಿತ ಸಮುದಾಯಗಳ ಜನರ ಜನಸಂಖ್ಯೆಗೆ ಅನುಗುಣವಾಗಿ ಮೀಸಲಾತಿ ಸಿಗಬೇಕು, ಈ ಕಾರಣಕ್ಕಾಗಿ ವಾಲ್ಮೀಕಿ ಸಮುದಾಯದ ಎಸ್.ಟಿ ಮೀಸಲು ಹೆಚ್ಚಳ ಹೋರಾಟಕ್ಕೆ ಬೆಂಬಲ ನೀಡಿದ್ದೆ. ವಾಲ್ಮೀಕಿ ಗುರು ಪೀಠದ ಶ್ರೀ  ಪ್ರಸನ್ನಾನಂದಪುರಿ ಸ್ವಾಮೀಜಿಯವರು ಇಂದು ನನ್ನನ್ನು ಭೇಟಿ ಮಾಡಿ ಧನ್ಯವಾದ ಸಲ್ಲಿಸಿ, ಅಭಿನಂದಿಸಿದರು' ಎಂದು ತಿಳಿಸಿದ್ದಾರೆ.

Similar News