ಬೆಳಗಾವಿ | ಕಲುಷಿತ ನೀರು ಸೇವನೆಯಿಂದ ಅಸ್ವಸ್ಥಗೊಂಡಿದ್ದ ಓರ್ವ ಮೃತ್ಯು
4 ದಿನಗಳ ಅಂತರದಲ್ಲಿ ಹಲವರು ಅಸ್ವಸ್ಥ, ಆಸ್ಪತ್ರೆಗೆ ದಾಖಲು
Update: 2022-10-27 12:52 IST
ಬೆಳಗಾವಿ: ಕಲುಷಿತ ನೀರು ಕುಡಿದು ಓರ್ವ ವ್ಯಕ್ತಿ ಮೃತಪಟ್ಟಿರುವ ಘಟನೆ ಜಿಲ್ಲೆಯ ರಾಮದುರ್ಗಾ ತಾಲೂಕಿನ ಮದೇನೂರು ಗ್ರಾಮದಲ್ಲಿ ವರದಿಯಾಗಿದೆ.
ಮದೇನೂರು ಗ್ರಾಮದ ನಿವಾಸಿ ಶಿವಪ್ಪ (70) ಮೃತಪಟ್ಟಿರುವ ವ್ಯಕ್ತಿಯಾಗಿದ್ದು, ತೀವ್ರವಾಗಿ ಅಸ್ವಸ್ಥರಾಗಿದ್ದ ಅವರನ್ನು ಬಾಗಲಕೋಟೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು ಎನ್ನಲಾಗಿದೆ.
ನಳಗಳಿಗೆ ನೀರು ಪೂರೈಸುವ ಪೈಪ್ ಲೈನ್ ಒಡೆದಿದ್ದು, ಪೈಪ್ ಮುಖಾಂತರ ಕುಡಿಯುವ ನೀರಿನಲ್ಲಿ ಚರಂಡಿ ನೀರು ಸರಬರಾಜು ಆಗಿದೆ. ಇದರಿಂದಾಗಿ ಅವಘಡ ಸಂಭವಿಸಿದೆನ್ನಲಾಗಿದೆ. 50 ಕ್ಕೂ ಹೆಚ್ಚು ಜನರನ್ನು ರಾಮದುರ್ಗಾ ಸರಕಾರಿ ಆಸ್ಪತ್ರೆ ಹಾಗೂ ಖಾಸಗಿ ಆಸ್ಪತ್ರೆಗಳಿಗೆ ದಾಖಲಿಸಲಾಗಿದ್ದು, 4 ದಿನಗಳ ಅಂತರದಲ್ಲಿ ಹಲವರು ಅಸ್ವಸ್ಥರಾಗಿದ್ದಾರೆ ಎಂದು ತಿಳಿದು ಬಂದಿದೆ.
ಸ್ಥಳಕ್ಕೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಇದನ್ನೂ ಓದಿ: ಬೆಳಗಾವಿ: ಕಲುಷಿತ ನೀರು ಕುಡಿದು 50ಕ್ಕೂ ಹೆಚ್ಚು ಜನ ಅಸ್ವಸ್ಥ