×
Ad

ಅಮಾನತುಗೊಂಡಿದ್ದ ಇನ್ಸ್ ಪೆಕ್ಟರ್ ಹೃದಯಾಘಾತದಿಂದ ಮೃತ್ಯು

Update: 2022-10-27 17:16 IST

ಬೆಂಗಳೂರು, ಅ.27: ಕರ್ತವ್ಯ ಲೋಪ ಆರೋಪದಡಿ ಅಮಾನತುಗೊಂಡಿದ್ದ ಇಲ್ಲಿನ ಕೆಆರ್ ಪುರ ಪೊಲೀಸ್ ಠಾಣೆಯ ಇನ್‍ಸ್ಪೆಕ್ಟರ್ ಎಚ್.ಎಲ್. ನಂದೀಶ್ ಹೃದಯಾಘಾತದಿಂದಾಗಿ ಮೃತಪಟ್ಟಿದ್ದಾರೆ.

ಗುರುವಾರ ಬೆಳಗ್ಗೆ ನಂದೀಶ್ ಅವರಿಗೆ ಎದೆನೋವು ಕಾಣಿಸಿಕೊಂಡಿತ್ತು. ಕೂಡಲೇ ಅವರನ್ನು ಕುಟುಂಬಸ್ಥರು ಸ್ಥಳೀಯ ಖಾಸಗಿ ಆಸ್ಪತ್ರೆಗೆ ಕರೆದೊಯ್ದಿದ್ದರು. ಆದರೆ, ಚಿಕಿತ್ಸೆ ಫಲಕಾರಿಯಾಗದೆ, ಹೃದಯಾಘಾತದಿಂದ ಮೃತಪಟ್ಟಿರುವುದಾಗಿ ತಿಳಿದುಬಂದಿದೆ.

ಅಮಾನತುಗೊಂಡಿದ್ದ ಇನ್ಸ್ ಪೆಕ್ಟರ್:  ಕೆಆರ್ ಪುರದಲ್ಲಿರುವ ಟಾನಿಕ್ ಬಾರ್ ಮತ್ತು ರೆಸ್ಟೋರೆಂಟ್ ತಡರಾತ್ರಿ 2 ಗಂಟೆಯವರೆಗೂ ತೆರೆದಿತ್ತು. ಈ ಸಂಬಂಧ ಸಿಸಿಬಿ ದಾಳಿ ಮಾಡಿ, ಮಾಲಕರು ಹಾಗೂ ಸಿಬ್ಬಂದಿ ವಿರುದ್ಧ ಪ್ರಕರಣ ದಾಖಲಿಸಿತ್ತು. ಆದರೆ, ಇದೇ ಪ್ರಕರಣದಲ್ಲಿ ಕಾನೂನು ಕ್ರಮ ಕೈಗೊಳ್ಳದೇ ಕರ್ತವ್ಯಲೋಪ ಎಸಗಿದ್ದ ಆರೋಪದಡಿ ನಂದೀಶ್ ಅವರನ್ನು ನಗರ ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿ ಅವರು ಸೇವೆಯಿಂದ ಅಮಾನತು ಮಾಡಿದ್ದರು.

ಅಮಾನತು ಅವಧಿಯಲ್ಲಿ ನಂದೀಶ್ ಅವರು ಮನೆಯಲ್ಲಿ ಹೆಚ್ಚು ಸಮಯ ಕಳೆಯುತ್ತಿದ್ದರು ಎಂದು ಹೇಳಲಾಗುತ್ತಿದೆ.

Similar News