ಅ.30: ಮಂಗಳೂರು ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನ
Update: 2022-10-27 19:37 IST
ಮಂಗಳೂರು, ಅ.27: ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಅ.30ರಂದು ನಗರದ ಶಾರದಾ ವಿದ್ಯಾಲಯದ ಸಭಾಂಗಣದಲ್ಲಿ ಮಂಗಳೂರು ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನ ನಡೆಯಲಿದೆ.
ಅಂದು ಬೆಳಗ್ಗೆ 9ಕ್ಕೆ ನಗರ ಪೊಲೀಸ್ ಆಯುಕ್ತ ಶಶಿಕುಮಾರ್ ರಾಷ್ಟ್ರದ್ವಜಾರೋಹಣ, ದ.ಕ. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಎಂ.ಪಿ.ಶ್ರೀನಾಥ್ ಪರಿಷತ್ತಿನ ಧ್ವಜಾರೋಹಣ, ಮಂಗಳೂರು ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಡಾ.ಮಂಜುನಾಥ ಶ್ರೀಪಾದ ರೇವಣಕರ ಸಮ್ಮೇಳನದ ದ್ವಜಾರೋಹಣ ನೆರವೇರಿಸುವರು.
ಹಿರಿಯ ಸಾಹಿತಿ ಹಾಗೂ ರಂಗಕರ್ಮಿ ಡಾ.ನಾ.ದಾಮೋದರ ಶೆಟ್ಟಿ ಅಧ್ಯಕ್ಷತೆ ವಹಿಸುವರು, ಕನ್ನಡ ಸಾಹಿತ್ಯ ಪರಿಷತ್ ರಾಜ್ಯಾಧ್ಯಕ್ಷ ನಾಡೋಜ ಡಾ.ಮಹೇಶ್ ಜೋಷಿ ಕಾರ್ಯಕ್ರಮ ಉದ್ಘಾಟಿಸುವರು. ಶಾಸಕ ವೇದವ್ಯಾಸ್ ಕಾಮತ್ ಪುಸ್ತಕ ಪ್ರದರ್ಶನ ಮಳಿಗೆ ಉದ್ಘಾಟಿಸುವರು ಎಂದು ಪ್ರಕಟನೆ ತಿಳಿಸಿದೆ.