JDS ರಾಷ್ಟ್ರೀಯ ಅಧ್ಯಕ್ಷರಾಗಿ ಎಚ್‌.ಡಿ.ದೇವೇಗೌಡ ಅವಿರೋಧ ಆಯ್ಕೆ

Update: 2022-10-27 19:23 GMT

ಬೆಂಗಳೂರು: ಜೆಡಿಎಸ್‌ ರಾಷ್ಟ್ರೀಯ ಅಧ್ಯಕ್ಷರಾಗಿ ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡ ಅವರು ಮತ್ತೂಮ್ಮೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಜೆಪಿ ಭವನದಲ್ಲಿ ಗುರುವಾರ ನಡೆದ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಲ್ಲಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷರನ್ನಾಗಿ ಮಾಜಿ ಪ್ರಧಾನಿ ಹೆಚ್‌.ಡಿ.ದೇವೇಗೌಡರನ್ನು ಅವಿರೋಧವಾಗಿ ಆಯ್ಕೆ ಮಾಡಲು ನಿರ್ಣಯ ಕೈಗೊಳ್ಳಲಾಯಿತು.

ಎಚ್‌.ಡಿ.ದೇವೇಗೌಡರೇ ರಾಷ್ಟ್ರೀಯ ಅಧ್ಯಕ್ಷರಾಗಿ ಮುಂದುವರಿಯಬೇಕು ಎಂದು ಎಲ್ಲ ರಾಜ್ಯ ಪ್ರತಿನಿಧಿಗಳ ಒಮ್ಮತ ಅಭಿಪ್ರಾಯ ಪಟ್ಟರು. 13 ರಾಜ್ಯಗಳ ಪ್ರತಿನಿಧಿಗಳು ಸಭೆಯಲ್ಲಿ ಭಾಗಿಯಾಗಿದ್ದರು.

ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ, ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂ, ಕೇರಳದ  ಇಂಧನ ಸಚಿವ ಕೃಷ್ಣನ್‌ ಕುಟ್ಟಿ ಸಭೆಯಲ್ಲಿ ಪಾಲ್ಗೊಂಡಿದ್ದರು. ಜೆಡಿಎಸ್ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಗಳಾದ ಬಿ.ಎಂ.ಫಾರೂಕ್, ಝಫರುಲ್ಲಾ ಖಾನ್ ಉಪಸ್ಥಿತರಿದ್ದರು.

Similar News