ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ಕೋಟಿ ಕಂಠ ಗಾಯನ

Update: 2022-10-28 10:05 GMT

ಕೊಣಾಜೆ, ಅ.28: ಕರ್ನಾಟಕ ಸರ್ಕಾರದ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ನಿರ್ದೇಶನದಂತೆ ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ಕೋಟಿ ಕಂಠ ಗಾಯನ ಕಾರ್ಯಕ್ರಮವು ಶುಕ್ರವಾರ ಮಂಗಳ ಸಭಾಂಗಣದಲ್ಲಿ ನಡೆಯಿತು.

ಕಾರ್ಯಕ್ರಮದಲ್ಲಿ ಮಂಗಳೂರು ವಿಶ್ವವಿದ್ಯಾನಿಲಯದ ಸಿಬ್ಬಂದಿಯ ಐದು ತಂಡಗಳು 'ಕೋಟಿ ಕಂಠ ಗಾಯನ'ದಲ್ಲಿ ತೊಡಗಿಸಿಕೊಂಡರು ಹಾಗೂ ಇವರ ಜೊತೆಗೆ ವಿಶ್ವವಿದ್ಯಾನಿಲಯದ ಎಲ್ಲಾ ಸಿಬ್ಬಂದಿ ಹಾಡಿಗೆ ಧ್ವನಿಗೂಡಿಸಿದರು.

ಕೋಟಿ‌ಕಂಠ ಗಾಯನದ ಬಳಿಕ ಮಂಗಳೂರು ವಿವಿ ಕುಲಪತಿ ಪ್ರೊ.ಸುಬ್ರಹ್ಮಣ್ಯ ಯಡಪಡಿತ್ತಾಯ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಸಂಕಲ್ಪವಿಧಿ ಬೋಧಿಸಿದರು.

  ಕಾರ್ಯಕ್ರಮದಲ್ಲಿ ಮಂಗಳೂರು ವಿವಿ ಕುಲಸಚಿವ ಡಾ.ಕಿಶೋರ್ ಕುಮಾರ್ ಸಿ.ಕೆ., ಪರೀಕ್ಷಾಂಗ ಕುಲಸಚಿವ ಪ್ರೊ.ಪಿ.ಎಲ್.ಧರ್ಮ, ಹಣಕಾಸು ಅಧಿಕಾರಿ ಡಾ.ಸಂಗಪ್ಪ ಉಪಸ್ಥಿತರಿದ್ದರು. 

ಎಸ್ ವಿಪಿ ಕನ್ನಡ ಅಧ್ಯಯನ ಸಂಸ್ಥೆಯ ಪ್ರೊ.ಸೋಮಣ್ಣ ಹೊಂಗಳ್ಳಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಡಾ.ಧನಂಜಯ ಕುಂಬ್ಳೆ ವಂದಿಸಿದರು. ಡಾ.ಯಶಸ್ವಿನಿ ಕಾರ್ಯಕ್ರಮ ನಿರೂಪಿಸಿದರು.

Similar News