×
Ad

ಪುನೀತ್ ರಾಜ್‌ಕುಮಾರ್‌ ಮೊದಲ ಪುಣ್ಯಸ್ಮರಣೆ: ಸಿಎಂ ಬೊಮ್ಮಾಯಿ ಸೇರಿ ಹಲವರಿಂದ ಗೌರವ

Update: 2022-10-29 11:07 IST

ಬೆಂಗಳೂರು: ನಟ ಪುನೀತ್ ರಾಜ್‌ಕುಮಾರ್‌ ಅವರ ಮೊದಲ ಪುಣ್ಯಸ್ಮರಣೆ ಅಂಗವಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿದಂತೆ ಹಲವು ಗಣ್ಯರು ಗೌರವ ಸಲ್ಲಿಸಿದರು.

"ಬಾಲನಟನಾಗಿ ಚಿತ್ರರಂಗ ಪ್ರವೇಶಿಸಿ, ಪವರ್ ಸ್ಟಾರ್ ಆಗಿ ಕನ್ನಡಿಗರ ಜನಮಾನಸದಲ್ಲಿ ಶಾಶ್ವತ ಸ್ಥಾನ ಪಡೆದಿರುವ ಪ್ರೀತಿಯ ಅಪ್ಪು, ಡಾ. ಪುನೀತ್ ರಾಜಕುಮಾರ್ ರವರ ಪುಣ್ಯಸ್ಮರಣೆಯಂದು ಅವರಿಗೆ ಪ್ರೀತಿ ಪೂರ್ವಕ ನಮನಗಳು'' ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಟ್ವೀಟ್ ಮಾಡಿದ್ದಾರೆ. 

 'ಒಳ್ಳೆಯದನ್ನು ಬಯಸುವವರ ಮನಸ್ಸು, ಹೃದಯದಲ್ಲಿ ಅಪ್ಪು ಇನ್ನೂ ಬದುಕಿದ್ದಾರೆ. ತಮ್ಮ ಕನಸಿನ #ಗಂಧದಗುಡಿಯ ಮೂಲಕ ಅವರು ಪರಿಸರದಲ್ಲಿ ಲೀನವಾಗಿದ್ದಾರೆ. ನಿಮ್ಮನು ಪಡೆದ ನಾವು ನಿಜಕ್ಕೂ ಪುನೀತ.' ಎಂದು ಟ್ವಿಟರ್ ನಲ್ಲಿ ಬರೆದುಕೊಂಡಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್, ವಿಡಿಯೋ ಒಂದನ್ನು ಹಂಚಿಕೊಂಡಿದ್ದಾರೆ.  

''ಪುನೀತ್ ರಾಜ್‍ಕುಮಾರ್ ನಟನಾಗಿ ಮಾತ್ರವಲ್ಲ, ಸಾಮಾಜಿಕ ಕಳಕಳಿ ಮತ್ತು ನಿಸ್ವಾರ್ಥ ಸೇವೆಗಳಿಂದ ಇತರರಿಗೆ ಮಾದರಿಯಾದವರು. ಪುನೀತ್ ನಮ್ಮನ್ನಗಲಿ ಒಂದು ವರ್ಷ ಕಳೆದಿದೆ, ಅವರ ಸರ್ವಜನಪ್ರಿಯ ವ್ಯಕ್ತಿತ್ವ ಮತ್ತು ಆದರ್ಶದ ಬದುಕು ಸದಾ ನಮ್ಮ ಕಣ್ಣ ಮುಂದಿರುತ್ತದೆ. ಎಂದಿಗೂ ಮಾಸದ ನಗುಮೊಗದ ಅಪ್ಪುವಿಗೆ ಗೌರವ ನಮನಗಳು''

- ಸಿದ್ದರಾಮಯ್ಯ, ವಿಧಾನಸಭೆ ವಿರೋಧ ಪಕ್ಷದ ನಾಯಕರು

''ಜನಮಾನಸದಲ್ಲಿ ಚಿರಸ್ಥಾಯಿ ಸ್ಥಾನ ಪಡೆದಿರುವ ನೆಚ್ಚಿನ ಕಲಾವಿದ, ನಮ್ಮೆಲ್ಲರ ಪ್ರೀತಿಯ ಅಪ್ಪು ಶ್ರೀ ಪುನೀತ್ ರಾಜಕುಮಾರ್ ಅವರ ಪ್ರಥಮ ಪುಣ್ಯತಿಥಿಯಂದು ಅವರಿಗೆ ಭಾವಪೂರ್ಣ ನಮನಗಳು. ಅವರ ಕಲಾವಂತಿಕೆ, ಹೃದಯವಂತಿಕೆಯ ವ್ಯಕ್ತಿತ್ವ ಎಂದೆಂದಿಗೂ ಅಜರಾಮರ''

- ಬಿ.ಎಸ್ ಯಡಿಯೂರಪ್ಪ, ಮಾಜಿ ಮುಖ್ಯಮಂತ್ರಿ

ಇದನ್ನೂ ಓದಿ: 'ನಿಮ್ಮನ್ನೆಲ್ಲ ನೋಡುವ ಕಾತುರದಲ್ಲಿ...': ಪುನೀತ್ ರಾಜ್ ಕುಮಾರ್ ಮಾಡಿದ್ದ ಟ್ವೀಟ್​ ವೈರಲ್

Similar News