×
Ad

ಹಿರಿಯಡ್ಕ: ಕಾರು ಢಿಕ್ಕಿ; ಬೈಕ್ ಸವಾರ ಮೃತ್ಯು

Update: 2022-10-29 18:39 IST

ಹಿರಿಯಡ್ಕ : ಕಾರೊಂದು ಬೈಕಿಗೆ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಮೃತಪಟ್ಟ ಘಟನೆ ಹಿರಿಯಡ್ಕ ಸರಕಾರಿ ಪದವಿ ಪೂರ್ವ ಕಾಲೇಜಿನ ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.

ಮೃತರನ್ನು ಹಿರಿಯಡ್ಕ ಪುತ್ತಿಗೆ ನಿವಾಸಿ ಸ್ಟ್ಯಾಲಿನ್ (18) ಎಂದು ಗುರುತಿಸಲಾಗಿದೆ. ಇವರು ಹಿರಿಯಡ್ಕ ಪೇಟೆಯಿಂದ ಪುತ್ತಿಗೆಯಲ್ಲಿನ ಮನೆಗೆ ಹೋಗುತ್ತಿದ್ದಾಗ ಎದುರಿನಿಂದ ಬಂದ ಕಾರು ಢಿಕ್ಕಿ ಹೊಡೆಯಿತ್ತೆನ್ನಲಾಗಿದೆ. ಇದರಿಂದ ಗಂಭೀರವಾಗಿ ಗಾಯಗೊಂಡ ಸ್ಟ್ಯಾಲಿನ್ ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಮೃತಪಟ್ಟರು ಎಂದು ಪೊಲೀಸರು ತಿಳಿಸಿದ್ದಾರೆ.

ಇದೇ ವೇಳೆ ಬೈಕ್ ಹಿಂಬದಿಯಿಂದ ಬರುತ್ತಿದ್ದ ಇನ್ನೊಂದು ಕಾರು ನಿಯಂತ್ರಣ ತಪ್ಪಿ ರಸ್ತೆಯ ಬದಿಯ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದು ಪೊದೆಯೊಳಗೆ ನುಗ್ಗಿದೆ. ಈ ಬಗ್ಗೆ ಹಿರಿಯಡ್ಕ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Similar News