ಬೆಂಗಳೂರು: ಮೇಲ್ಸೇತುವೆ ಮೇಲಿಂದ ಬಿದ್ದು ಇಬ್ಬರು ಯುವಕರು ಮೃತ್ಯು
Update: 2022-10-29 19:55 IST
ಬೆಂಗಳೂರು, ಅ.29: ಬೈಕ್‍ನಲ್ಲಿ ನಗರದ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ರಸ್ತೆಯ ಮೇಲ್ಸೇತುವೆ ಮೇಲಿಂದ ಬಿದ್ದು, ಇಬ್ಬರು ಮೃತಪಟ್ಟಿರುವ ಘಟನೆ ವರದಿಯಾಗಿದೆ.
ವಿಕ್ರಮ್(28), ಅಮಿತ್ ಸಿಂಗ್(27) ಎಂಬುವರು ಮೃತಪಟ್ಟಿದ್ದಾರೆ. ಇವರ ಜೊತೆಗಿದ್ದ ಇನ್ನೊಬ್ಬ ವ್ಯಕ್ತಿ ಸೌರಭ್(27) ಸ್ಥಿತಿ ಗಂಭೀರವಾಗಿದ್ದು, ಆತನನ್ನು ಸ್ಥಳೀಯ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂದು ಯಲಹಂಕ ಸಂಚಾರ ಠಾಣಾ ಪೊಲೀಸರು ತಿಳಿಸಿದ್ದಾರೆ.
ಎಚ್‍ಎಸ್‍ಆರ್ ಲೇಔಟ್‍ನಲ್ಲಿ ನೆಲೆಸಿದ್ದ ಬೈಕ್ ಸವಾರರು, ಶನಿವಾರ ಇಲ್ಲಿನ ಎಲಿವೇಟೆಡ್ ರಸ್ತೆಯ ಮೇಲ್ಸುತುವೆಯಿಂದ ಬಿದ್ದು ತೀವ್ರವಾಗಿ ಗಾಯಗೊಂಡು ಸಾವನ್ನಪ್ಪಿದ್ದಾರೆ.
ಮರಣೋತ್ತರ ಪರೀಕ್ಷೆಗಾಗಿ ಯಲಹಂಕ ಸರಕಾರಿ ಆಸ್ಪತ್ರೆಗೆ ಈ ಇಬ್ಬರ ಮೃತದೇಹವನ್ನು ಸ್ಥಳಾಂತರ ಮಾಡಲಾಗಿದೆ. ಈ ಬಗ್ಗೆ ಯಲಹಂಕ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.