ಅ.31ರಂದು ಉಡುಪಿ ಜಿಲ್ಲಾ ಮಟ್ಟದ ಕ್ರಾಸ್‌ಕಂಟ್ರಿ ಓಟ
ಉಡುಪಿ, ಅ.29: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಪೊಲೀಸ್ ಇಲಾಖೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಉಡುಪಿ ಜಿಲ್ಲಾ ಅಥ್ಲೆಟಿಕ್ ಅಸೋಸಿಯೇಷನ್ ಹಾಗೂ ಸರಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರ ತೆಂಕನಿಡಿಯೂರು ಇವರ ಸಂಯುಕ್ತ ಆಶ್ರಯದಲ್ಲಿ ಸರ್ದಾರ್ ವಲ್ಲಭ ಭಾಯ್ ಪಟೇಲ್ ಅವರ ಜನ್ಮ ವಾರ್ಷಿಕೋತ್ಸವದ ಅಂಗವಾಗಿ ‘ಏಕತೆಗಾಗಿ ಓಟ’ ಎಂಬ ಘೋಷ ವಾಕ್ಯದಡಿ ಜಿಲ್ಲಾ ಮಟ್ಟದ ಕ್ರಾಸ್‌ಕಂಟ್ರಿ ಓಟದ ಸ್ಪರ್ಧೆಯೊಂದು ಅ.31ರ ಸೋಮವಾರ ಬೆಳಗ್ಗೆ 6 ಗಂಟೆಗೆ ಅಜ್ಜರಕಾಡು ಹುತಾತ್ಮರ ಸ್ಮಾರಕ ಸ್ಥಳದಲ್ಲಿ ನಡೆಯಲಿದೆ.
ಜಿಲ್ಲಾ ಉಸ್ತುವಾರಿ ಸಚಿ ಎಸ್.ಅಂಗಾರ ಕ್ರಾಸ್‌ಕಂಟ್ರಿ ಸ್ಪರ್ಧೆಯನ್ನು ಉದ್ಘಾಟಿಸಲಿದ್ದು, ಉಡುಪಿ ಶಾಸಕ ಕೆ.ರಘುಪತಿ ಭಟ್ ಅಧ್ಯಕ್ಷತೆ ವಹಿಸಲಿದ್ದಾರೆ.
17 ವರ್ಷದೊಳಗಿನ ಬಾಲಕ, ಬಾಲಕಿಯರು, ೨೦ ವರ್ಷದೊಳಗಿನ ಯುವಕ, ಯುವತಿಯರು ಹಾಗೂ ೨೦ ವರ್ಷ ಮೇಲ್ಪಟ್ಟ ಪುರುಷ ಮತ್ತು ಮಹಿಳೆಯರಿಗೆ ಪ್ರತ್ಯೇಕ ಸ್ಪರ್ಧೆ ಇದ್ದು, ಮೊದಲ ಆರು ಸ್ಥಾನ ಪಡೆದ ವಿಜೇತರಿಗೆ ನಗದು ಬಹುಮಾನ ಮತ್ತು ಪ್ರಶಸ್ತಿ ಪತ್ರ ನೀಡಿ ಗೌರಸಲಾಗುವುದು ಎಂದು ಇಲಾಖೆಯ ಪ್ರಕಟಣೆ ತಿಳಿಸಿದೆ.
ಕ್ರಾಸ್‌ಕಂಟ್ರಿ ರೇಸ್ ಅ.೩೧ರಂದು ಬೆಳಗ್ಗೆ 6ಗಂಟೆಗೆ ಅಜ್ಜರಕಾಡಿನ ಹುತಾತ್ಮರ ಸ್ಮಾರಕ ಬಳಿಯಿಂದ ಪ್ರಾರಂಭಗೊಳ್ಳಲಿದೆ. ಆಸಕ್ತರು ಓಟದಲ್ಲಿ ಪಾಲ್ಗೊಳ್ಳಲು - https://forms.gle/hsXGjQ8e4wXXqKby6-ರಲ್ಲಿ ಅ. ೩೦ರ ಒಳಗೆ ಹೆಸರು ನೊಂದಾಯಿಸಿಕೊಳ್ಳಬೇಕು. ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಉಡುಪಿ ದೂ.ಸಂಖ್ಯೆ: 9480886467 ಅನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.