ಉಡುಪಿ ನಗರಸಭೆ ಸದಸ್ಯೆ ಸೆಲಿನಾ ಕರ್ಕಡ ನಿಧನ
Update: 2022-10-30 00:01 IST
ಕಾಂಗ್ರೆಸ್ ಮುಖಂಡೆ, ಉಡುಪಿ ನಗರಸಭೆ ಪೆರಂಪಳ್ಳಿ ವಾರ್ಡ್ ಸದಸ್ಯೆ ಸೆಲಿನಾ ಕರ್ಕಡ(52) ಅಲ್ಪಕಾಲದ ಅಸೌಖ್ಯದಿಂದ ಶನಿವಾರ ರಾತ್ರಿ ನಿಧನರಾದರು.
ತೀವ್ರ ಅನಾರೋಗ್ಯ ಕಾರಣ ಇವರು ಕೆಲವು ದಿನಗಳ ಹಿಂದೆ ಮಣಿಪಾಲ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಶನಿವಾರ ರಾತ್ರಿ 11:30ರ ಸುಮಾರಿಗೆ ಚಿಕಿತ್ಸೆ ಫಲಕಾರಿಯಾಗದೆ ಅವರು ಕೊನೆಯುಸಿರೆಳೆದರೆಂದು ತಿಳಿದುಬಂದಿದೆ
ಇವರು ಎರಡನೇ ಅವಧಿಗೆ ಕಾಂಗ್ರೆಸ್ ಪಕ್ಷ ದಿಂದ ನಗರಸಭೆ ಸದಸ್ಯೆಯಾಗಿ ಆಯ್ಕೆಯಾಗಿದ್ದರು.
ಮೃತರು ಪತಿ ಹಾಗೂ ಓರ್ವ ಪುತ್ರನನ್ನು ಅಗಲಿದ್ದಾರೆ. ಇವರ ನಿಧನಕ್ಕೆ ಉಡುಪಿ ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಗೀತಾ ವಾಗ್ಲೆ ಹಾಗೂ ಉಡುಪಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಮೇಶ್ ಕಾಂಚನ್ ಸಂತಾಪ ವ್ಯಕ್ತಪಡಿಸಿದ್ದಾರೆ.