ಉಡುಪಿ ನಗರ: ಅ.31, ನ.1ರಂದು ನೀರು ಪೂರೈಕೆಯಲ್ಲಿ ವ್ಯತ್ಯಯ
Update: 2022-10-30 10:29 IST
ಉಡುಪಿ, ಅ.30: ಉಡುಪಿ ನಗರಸಭಾ ವ್ಯಾಪ್ತಿಯ 35 ವಾರ್ಡ್ ಗಳಲ್ಲಿ ಅ.31 ಮತ್ತು ನವೆಂಬರ್ 1ರಂದು ಕುಡಿಯುವ ನೀರು ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ನಗರಸಭೆಯ ಪ್ರಕಟನೆ ತಿಳಿಸಿದೆ.
ಬಜೆ ನೀರು ಸರಬರಾಜು ರೇಚಕ ಸ್ಥಾವರದಲ್ಲಿ ಪ್ಯಾನೆಲ್ ಬೋರ್ಡ್ ಟ್ರಾನ್ಸ್ ಫಾರ್ಮರ್ ಹಾಗೂ ಮೋಟರ್ ಬದಲಾವಣೆ ಮಾಡುವ ಕಾಮಗಾರಿ ನಡೆಯಲಿದೆ. ಈ ಕಾರಣದಿಂದ ಸೋಮವಾರ ಮತ್ತು ಮಂಗಳವಾರ ಉಡುಪಿ ನಗರಸಭಾ ವ್ಯಾಪ್ತಿಯ 35 ವಾರ್ಡುಗಳಲ್ಲಿ ಕುಡಿಯುವ ನೀರು ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಪೌರಯುಕ್ತರು ಪ್ರಕಟನೆಯಲ್ಲಿ ಕೋರಿದ್ದಾರೆ.