ಗುಜರಾತ್‌ನಲ್ಲಿ ಇಂದು ಮೂರು ರಾಜ್ಯದ ಮುಖ್ಯಮಂತ್ರಿಗಳಿಂದ ಮೆಗಾ ಸಂಡೆ ರ್ಯಾಲಿ
ಅಹಮದಾಬಾದ್: ದಿಲ್ಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್, ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಹಾಗೂ ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ Rajasthan Chief Minister Ashok Gehlot ಅವರು ರವಿವಾರ ಗುಜರಾತ್‌ನಲ್ಲಿ ಚುನಾವಣಾ ರ್ಯಾಲಿಗಳನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.
ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕರಾದ ಕೇಜ್ರಿವಾಲ್ ಹಾಗೂ ಮಾನ್ ಅವರು ಭಾವನಗರದ ಪಾಲಿಟಾನಾ ಪಟ್ಟಣ ಮತ್ತು ರಾಜ್‌ಕೋಟ್ ಜಿಲ್ಲೆಯ ಧೋರಾಜಿಯಲ್ಲಿ ಜಂಟಿಯಾಗಿ ಎರಡು ರ್ಯಾಲಿಗಳನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.
ಇಬ್ಬರು ಎಎಪಿ ನಾಯಕರು ಶುಕ್ರವಾರದಿಂದ ಬಿಜೆಪಿ ಆಡಳಿತವಿರುವ ಗುಜರಾತ್‌ಗೆ ಮೂರು ದಿನಗಳ ಭೇಟಿಯಲ್ಲಿದ್ದಾರೆ.
ಎಎಪಿ ರಾಷ್ಟ್ರೀಯ ಸಂಚಾಲಕ ಕೇಜ್ರಿವಾಲ್ ಅವರು ಇತ್ತೀಚೆಗೆ ಗುಜರಾತ್‌ಗೆ ಹಲವು ಬಾರಿ ಭೇಟಿ ನೀಡಿದ್ದಾರೆ ಮತ್ತು ತಮ್ಮ ಪಕ್ಷವು ಅಧಿಕಾರಕ್ಕೆ ಬಂದರೆ ರಾಜ್ಯದ ಜನರಿಗೆ ಹಲವಾರು ಯೋಜನೆ ನೀಡುವುದಾಗಿ ಘೋಷಿಸಿದ್ದಾರೆ.
ಈ ವರ್ಷಾಂತ್ಯದಲ್ಲಿ 182 ಸದಸ್ಯ ಬಲದ ಗುಜರಾತ್ ವಿಧಾನಸಭೆಗೆ ಚುನಾವಣೆ ನಡೆಯಲಿದ್ದು, ರವಿವಾರದಂದು ರಾಜಸ್ಥಾನ ಮುಖ್ಯಮಂತ್ರಿ ಹಾಗೂ ಕಾಂಗ್ರೆಸ್‌ನ ಹಿರಿಯ ನಾಯಕ ಗೆಹ್ಲೋಟ್ ಅವರು ಗುಜರಾತ್‌ನಲ್ಲಿ ಮೂರು ರ್ಯಾಲಿಗಳನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.
ಅವರು ಮೊದಲು ಬನಸ್ಕಾಂತದ ವಿರಾಮ್‌ಪುರದಲ್ಲಿ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿದ ನಂತರ ಸಬರಕಾಂತ ಜಿಲ್ಲೆಯ ಖೇದ್ಬ್ರಹ್ಮ ಹಾಗೂ ಅರಾವಳಿ ಜಿಲ್ಲೆಯ ಭಿಲೋಡಾದಲ್ಲಿ ರ್ಯಾಲಿಗಳನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.
ಗುಜರಾತ್ ವಿಧಾನಸಭಾ ಚುನಾವಣೆಗೆ ಇನ್ನೂ ವೇಳಾಪಟ್ಟಿಯನ್ನು ಪ್ರಕಟಿಸಿಲ್ಲ.