ನ.2ರಿಂದ ರಾಜ್ಯದಲ್ಲಿ ಮತ್ತೆ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

Update: 2022-10-30 12:30 GMT

ಬೆಂಗಳೂರು: ಒಂದು ವಾರದಿಂದ ಬಿಡುವು ಕೊಟ್ಟಿದ್ದ ಮಳೆ ಶನಿವಾರ ರಾತ್ರಿ ಮತ್ತೆ ನಗರದೆಲ್ಲೆಡೆ ಸುರಿದಿದ್ದು, ನವೆಂಬರ್ 2ರಿಂದ ರಾಜ್ಯದಲ್ಲಿ ಮತ್ತೆ ಮಳೆ (Rain) ಆರ್ಭಟ ಆರಂಭಗೊಳ್ಳಲಿದೆ ಎಂದು ಹವಾಮಾನ ಇಲಾಖೆ (Meteorological Department) ಮುನ್ಸೂಚನೆ ನೀಡಿದೆ. 

ಹಿಂಗಾರು ಆಗಮನದ ಹಿನ್ನಲೆಯಲ್ಲಿ ರಾಜ್ಯದ ಕೆಲ ಜಿಲ್ಲೆಗಳಲ್ಲಿ ನ.2ರಿಂದ ಮಳೆಯಾಗಲಿದೆ. ಬೆಂಗಳೂರು ನಗರ ಮತ್ತು ಗ್ರಾಮಾಂತರ, ರಾಮನಗರ, ತುಮಕೂರು, ಕೋಲಾರ, ಕೊಡಗು, ಚಿಕ್ಕಮಗಳೂರು ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಭಾರೀ ಮಳೆಯಾಗಲಿದೆ ಎಂದು ಎಚ್ಚರಿಕೆ ನೀಡಿದೆ. 

ನ.2ರಿಂದ ಚಾಮರಾಜನಗರ, ಕೋಲಾರ, ತುಮಕೂರು, ರಾಮನಗರ, ಬೆಂಗಳೂರುನಗರ, ಗ್ರಾಮಾಂತರ ಹಾಗೂ ಕೊಡಗು ಜಿಲ್ಲೆಯಲ್ಲಿ ಭಾರೀ ಮಳೆಯಾಗುವ ಕಾರಣ ಯೆಲ್ಲೋ ಅಲರ್ಟ್ ಘೋಷಣೆ ಮಾಡಿದೆ. ಇನ್ನು ಶನಿವಾರ ರಾತ್ರಿ ಶುರುವಾದ ತುಂತುರು ಮಳೆ ರಾತ್ರಿಯೆಲ್ಲಾ ಸುರಿದಿದೆ. 

ಇನ್ನು ಉತ್ತರ ಒಳನಾಡಿನಲ್ಲಿ ಚಳಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಒಣಹವೆ ಇರಲಿದೆ. ಕಾವೇರಿ ಜಲಾನಯನ ಪ್ರದೇಶದಲ್ಲಿಯೂ ಈ ಬಾರಿ ಉತ್ತಮ ಮಳೆಯಾಗಿದೆ. ಕೆಆರ್‍ಎಸ್ ಸೇರಿದಂತೆ ದಕ್ಷಿಣ ಒಳನಾಡು ಭಾಗದ ಜಲಾಶಯಗಳು ಭರ್ತಿಯಾಗಿವೆ. ಇದಕ್ಕೆ ಪೂರಕವಾದ ವಾತಾವರಣ ಈಗಾಗಲೇ ನಿರ್ಮಾಣವಾಗಿದ್ದು, ಗುಡುಗು ಸಹಿತ ಹಗುರದಿಂದ ಸಾಧಾರಣವಾಗಿ ಮಳೆ ಬರಲಿದೆ ಎಂದು ಮಳೆ ಮುನ್ಸೂಚನೆ ವರದಿ ತಿಳಿಸಿದೆ.  

ಇದನ್ನೂ ಓದಿ: ಬಂಡೆಮಠದ ಬಸವಲಿಂಗ ಸ್ವಾಮೀಜಿ ಆತ್ಮಹತ್ಯೆ ಪ್ರಕರಣ: ಓರ್ವ ಸ್ವಾಮೀಜಿ, ಯುವತಿ ಸಹಿತ ಮೂವರ ಬಂಧನ

Similar News