ಮಂಡ್ಯ: ಪುನೀತ್ ರಾಜ್‍ಕುಮಾರ್ ಅಭಿಮಾನಿ ಆತ್ಮಹತ್ಯೆ

Update: 2022-10-30 16:18 GMT

ಮಂಡ್ಯ: ಪವರ್ ಸ್ಟಾರ್ ಪುನೀತ್ ರಾಜ್‍ಕುಮಾರ್ ಸ್ಮರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮನೆಗೆ ಮರಳಿದ ಅಭಿಮಾನಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶ್ರೀರಂಗಪಟ್ಟಣ ತಾಲೂಕು ಹೊಸ ಆನಂದೂರು ಗ್ರಾಮದಲ್ಲಿ ನಡೆದಿದೆ.

ಗ್ರಾಮದ ಅಪ್ಪು ಅಭಿಮಾನಿ ಕಿರಣ್(22) ಮೃತಪಟ್ಟವ. ಈತ ಶನಿವಾರ ಗ್ರಾಮದಲ್ಲಿ ನಡದ ಅಪ್ಪು ಸ್ಮರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಎನ್ನಲಾಗಿದೆ. ಕಾರ್ಯಕ್ರಮದ ಬಳಿಕ ಮನೆಗೆ ತೆರಳಿ ತಡರಾತ್ರಿ ಕೊಠಡಿಯಲ್ಲಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ವರದಿಯಾಗಿದೆ.

ಕೆ.ಆರ್.ಎಸ್. ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

Similar News