ಕಂದಾಯ ಸಚಿವರಿಗೂ ಪಕೋಡಾ ಮಾರುವ ಸ್ಥಿತಿ ಬಂದಿದೆ: ಸಚಿವ ಅಶೋಕ್ ವಿಡಿಯೋ ಹಂಚಿಕೊಂಡು ವ್ಯಂಗ್ಯವಾಡಿದ ಕಾಂಗ್ರೆಸ್

''ಕೇಂದ್ರ ಸರಕಾರದಿಂದಲೇ ಈ ಸ್ಥಿತಿ''

Update: 2022-10-31 10:17 GMT

ಬೆಂಗಳೂರು: ಕಂದಾಯ ಸಚಿವ ಆರ್. ಅಶೋಕ್ (R. Ashoka) ಅವರ ವಿಡಿಯೋ ಒಂದನ್ನು ಟ್ವಿಟರ್ ನಲ್ಲಿ ಹಂಚಿಕೊಂಡಿರುವ ಕಾಂಗ್ರೆಸ್,(Karnataka Congress) ಕೆಂದ್ರ ಸರಕಾರವನ್ನು ತರಾಟೆಗೆ ತೆಗೆದುಕೊಂಡಿದೆ.

''ಪ್ರಧಾನಿ ನರೇಂದ್ರ ಮೋದಿಯವರ #Pakodanomics ಆರ್ಥಿಕತೆಯಲ್ಲಿ ರಾಜ್ಯದ ಕಂದಾಯ ಸಚಿವರಿಗೂ ಪಕೋಡಾ ಮಾರುವ ಸ್ಥಿತಿ ಬಂದಿದೆ! '' ಎಂದು ಕಾಂಗ್ರೆಸ್ ವ್ಯಂಗ್ಯವಾಡಿದೆ.

''ಕೇಂದ್ರ ಸರ್ಕಾರ ರಾಜ್ಯದ ಪಾಲಿನ GST ಬಾಕಿ ಕೊಡಲಿಲ್ಲ, ಯೋಜನೆಗಳಿಗೆ ಅನುದಾನ ಕೊಡಲಿಲ್ಲ, ಕನ್ನಡಿಗರಿಗೆ ನಿಲ್ಲದ ಅನ್ಯಾಯಕ್ಕಾಗಿ ಈ ಸ್ಥಿತಿಯೇ ?'' ಎಂದು ಕಾಂಗ್ರೆಸ್ ಟೀಕಿಸಿದೆ.

ಇದನ್ನೂ ಓದಿ: ಬಿಲ್ ಪಾವತಿಗೆ 40 ಶೇ. ಕಮಿಷನ್ ಬೇಡಿಕೆ ಆರೋಪ: ಗುತ್ತಿಗೆದಾರನಿಂದ ದಯಾಮರಣ ಕೋರಿ ಅರ್ಜಿ

''ಸಚಿವ ಅಶೋಕ್ ಅವರೇ ಪಕೋಡಾ ಅಂಗಡಿ ಭದ್ರಗೊಳಿಸಿ, ಚುನಾವಣೆಯ ನಂತರ ಉಪಯೋಗಕ್ಕೆ ಬರಲಿದೆ!'' ಎಂದು ಕಾಂಗ್ರೆಸ್ ಟ್ವೀಟ್ ಮಾಡಿದೆ.

Similar News