×
Ad

ರಾಜ್ಯದ ಎಲ್ಲ ಶಾಲೆಗಳಲ್ಲಿ ಪ್ರತಿ ತಿಂಗಳ ಒಂದು ಶನಿವಾರ, ‘ಬ್ಯಾಗ್ ರಹಿತ ದಿನ’; ಮಾರ್ಗಸೂಚಿ ಪ್ರಕಟ

Update: 2022-10-31 22:31 IST

ಬೆಂಗಳೂರು, ಅ. 31: ರಾಷ್ಟೀಯ ಶಿಕ್ಷಣ ನೀತಿ-2020ರಡಿ ರಾಜ್ಯದ ಎಲ್ಲ ಶಾಲೆಗಳಲ್ಲಿ ಪ್ರತಿ ತಿಂಗಳ ಒಂದು ಶನಿವಾರದಂದು ಬ್ಯಾಗ್ ರಹಿತ  ದಿನವನ್ನಾಗಿ ಆಚರಿಸಲು ನಿರ್ಧರಿಸಲಾಗಿದ್ದು, ಶಿಕ್ಷಕರಿಗೆ ಮಾರ್ಗಸೂಚಿಗಳನ್ನು ಪ್ರಕಟಿಸಲಾಗಿದೆ.

ಈಗಾಗಲೇ ಕಲಿಕಾ ಚೇತರಿಕೆ ಉಪಕ್ರಮದ ಅಡಿಯಲ್ಲಿ ವಿದ್ಯಾರ್ಥಿಗಳಲ್ಲಿ ಅನ್ವಯಿಕ ಕಲಿಕಾ ಮನೋಭಾವವನ್ನು ಪ್ರೋತ್ಸಾಹಿಸುವಂತೆ, ಕಲಿಕಾ ಹಾಳೆಗಳಲ್ಲಿ ಚಟುವಟಿಕೆಗಳನ್ನು ನೀಡಲಾಗಿದೆ. ಈ ಕಲಿಕಾ ಹಾಳೆಗಳಲ್ಲಿನ ಚಟುವಟಿಕೆಗಳಿಗೆ ಪೂರಕವಾಗಿ ‘ಸಂಭ್ರಮ ಶನಿವಾರ' ಚಟುವಟಿಕಾ ಪುಸ್ತಕಗಳನ್ನು ರೂಪಿಸಿರುವುದರಿಂದ ಪ್ರತಿ ತಿಂಗಳಲ್ಲಿ ಒಂದು ಶನಿವಾರದಂದು ಬ್ಯಾಗ್ ರಹಿತ ದಿನವನ್ನು ಆಚರಿಸಲಾಗುವುದು. 

ಇದನ್ನೂ ಓದಿ: ನಂದಿನಿ ಹಾಲಿನ ದರ ಶೀಘ್ರದಲ್ಲೇ ಹೆಚ್ಚಳ: ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ 

ಈ ಸಂಭ್ರಮ ಶನಿವಾರದಂದು ಮಕ್ಕಳಲ್ಲಿ ನಾಗರಿಕ ಪ್ರಜ್ಞೆಯನ್ನು ಬೆಳೆಸುವ ಉದ್ದೇಶದಿಂದ ವಿವಿಧ ಹತ್ತು ವಿಷಯಗಳಲ್ಲಿ ಸ್ವಯಂ ವಿವರಣಾತ್ಮಕ ಚಿತ್ರ ಸಹಿತ ಚಟುವಟಿಕೆ ಪುಸ್ತಕಗಳನ್ನು ತರಗತಿಗಳಲ್ಲಿ ನಿರ್ವಹಿಸಲು ಶಿಕ್ಷಕರಿಗೆ ಮಾರ್ಗದರ್ಶಿ ಕೈಪಿಡಿಯನ್ನು ಸಿದ್ಧಪಡಿಸಲಾಗಿದ್ದು, ಡಿಎಸ್‍ಇಆರ್‍ಟಿ ವೆಬ್‍ಸೈಟ್ https://dsert.kar.nic.in ಅಪ್‍ಲೋಡ್ ಮಾಡಲಾಗಿದೆ. 

Similar News