ಜನನ, ಮರಣ ನೋಂದಣಿ ದಾಖಲಿಸಲು ಸೂಚನೆ

Update: 2022-10-31 18:05 GMT

ಮಂಗಳೂರು: ಜನನ ಮರಣ ನೋಂದಣಿಯನ್ನು ಕಡ್ಡಾಯವಾಗಿ ನೂರಕ್ಕೆ ನೂರರಷ್ಟು ದಾಖಲಾಗುವಂತೆ ಹಾಗೂ ಈ ಪ್ರಕ್ರಿಯೆಯಲ್ಲಿ ಯಾವುದೇ ನೋಂದಣಿಯು ಬಿಟ್ಟು ಹೋಗದಂತೆ ಎಚ್ಚರಿಕೆ ವಹಿಸಬೇಕು ಎಂದು ಜಿಲ್ಲಾಧಿಕಾರಿ ಹಾಗೂ ಜಿಪಂ ಸಿಇಒ ಡಾ.ಕುಮಾರ್ ಸೂಚಿಸಿದರು.

ದ.ಕ. ಜಿಲ್ಲಾಧಿಕಾರಿಯ ಕಚೇರಿ ಸಭಾಂಣದಲ್ಲಿ ಜಿಲ್ಲಾ ಮಟ್ಟದ ಜನನ ಮರಣ ನೋಂದಣಿ ಕುರಿತ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಮರಣದ ನೋಂದಣಿ ಮಾಡುವಾಗ ಮರಣದ ಕಾರಣವನ್ನು ನಿಖರವಾಗಿ ದಾಖಲಿಸಬೇಕು ಹಾಗೂ ಮರಣ ನೋಂದಣಿ ಮಾಡುವಾಗ ನಮೂನೆ-4ನ್ನು ತಂತ್ರಾಂಶದಲ್ಲಿ ಅಪ್‌ಲೋಡ್ ಮಾಡಬೇಕು, ಕೃಷಿ ಅಂಕಿ ಅಂಶ ಸಮನ್ವಯ ಸಮಿತಿಗೆ ಸಂಬಂಧಿಸಿದಂತೆ 2022-23ನೇ ಸಾಲಿನ ಮುಂಗಾರು ಋತುವಿನ ಬೆಳೆ ಅಂದಾಜು ಸಮೀಕ್ಷೆ ಯೋಜನೆಯಡಿ ಬೆಳೆ ಕಟಾವು ಪ್ರಯೋಗಗಳನ್ನು ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸಬೇಕು ಎಂದರು.

ಈ ಸಂದರ್ಭ ಜಿಲ್ಲಾಧಿಕಾರಿ 11ನೇ ಕೃಷಿ ಗಣತಿ ಕಾರ್ಯಕ್ಕೆ ಚಾಲನೆ ನೀಡಿ ಗ್ರಾಮಕರಣಿಕರು ಯಾವುದೇ ಸರ್ವೆ/ಸಬ್ ಸರ್ವೆ ನಂಬ್ರಗಳು ಬಿಟ್ಟು ಹೋಗದ ರೀತಿಯಲ್ಲಿ ಗಣತಿ ಕಾರ್ಯವನ್ನು ನಡೆಸಿ 2022ರ ಡಿಸೆಂಬರ್ 31ರೊಳಗೆ ಪೂರ್ಣಗೊಳಿಸುವಂತೆ ಎಲ್ಲಾ ತಹಶೀಲ್ದಾರರಿಗೆ ನಿರ್ದೇಶನ ನೀಡಿದರು.

ಅಪರ ಜಿಲ್ಲಾಧಿಕಾರಿ ಕೃಷ್ಣಮೂರ್ತಿ, ಕೃಷಿ ಇಲಾಖೆಯ ಜಂಟಿ ನಿರ್ದೇಶಕಿ ಸೀತಾ, ಲೀಡ್ ಬ್ಯಾಂಕ್ ಮ್ಯಾನೇಜರ್ ಪ್ರವೀಣ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಧಿಕಾರಿಡಾ.ಕಿಶೋರ್‌ಕುಮಾರ್ ಮತ್ತಿತರರು ಉಪಸ್ಥಿತದಿದ್ದರು.

Similar News