×
Ad

ದಿಲ್ಲಿ ಪಾದರಕ್ಷೆ ಕಾರ್ಖಾನೆಯಲ್ಲಿ ಅಗ್ನಿ ಅವಘಡ: ಇಬ್ಬರು ಮೃತ್ಯು, ಇನ್ನಿಬ್ಬರ ರಕ್ಷಣೆ

Update: 2022-11-01 11:38 IST

ಹೊಸದಿಲ್ಲಿ: ದಿಲ್ಲಿಯ ನರೇಲಾ ಇಂಡಸ್ಟ್ರಿಯಲ್ ಏರಿಯಾದಲ್ಲಿರುವ ಪಾದರಕ್ಷೆ ಕಾರ್ಖಾನೆಯಲ್ಲಿ ಮಂಗಳವಾರ ಸಂಭವಿಸಿದ ಅಗ್ನಿ ಅವಘಡದಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ.

ಈವರೆಗೆ ಮೂವರನ್ನು ರಕ್ಷಿಸಲಾಗಿದ್ದು, ಹಲವರು ಕಟ್ಟಡದಲ್ಲಿ ಸಿಲುಕಿರುವ ಶಂಕೆ ವ್ಯಕ್ತವಾಗಿದ್ದು, ಕೆಲವರು ಗಾಯಗೊಂಡಿದ್ದಾರೆ.

ಕೆಲವು ಗಾಯಾಳುಗಳನ್ನು ಆಸ್ಪತ್ರೆಗೆ ಸ್ಥಳಾಂತರಿಸಲಾಗಿದ್ದು, ಸಣ್ಣಪುಟ್ಟ ಗಾಯಗಳೊಂದಿಗೆ ಎಲ್ಲರೂ ಅಪಾಯದಿಂದ ಪಾರಾಗಿದ್ದಾರೆ ಎಂದು ಸುದ್ದಿ ಸಂಸ್ಥೆ ANI ವರದಿ ಮಾಡಿದೆ. ಮೃತಪಟ್ಟ ಇಬ್ಬರ ಗುರುತು ಪತ್ತೆ ಹಚ್ಚಲಾಗುತ್ತಿದೆ.

ಬೆಂಕಿಯನ್ನು ನಂದಿಸಲು 10 ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ಧಾವಿಸಿವೆ ಎಂದು ದಿಲ್ಲಿ ಅಗ್ನಿಶಾಮಕ ಸೇವೆ ತಿಳಿಸಿದೆ ಎಂದು ಎಎನ್ ಐ ವರದಿ ಮಾಡಿದೆ.

Similar News