ಪಿಎ ಕಾಲೇಜಿನಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ
Update: 2022-11-01 12:21 IST
ಮಂಗಳೂರು, ನ.1: ಪಿಎ ತಾಂತ್ರಿಕ ಮಹಾವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನೆ ಘಟಕದ ವತಿಯಿಂದ ಕನ್ನಡ ರಾಜ್ಯೋತ್ಸವವನ್ನು ವಿಜ್ರಂಭಣೆಯಿಂದ ಆಚರಿಸಲಾಯಿತು.
ಕಾಲೇಜಿನ ಉಪ ಪ್ರಾಂಶುಪಾಲೆ ಡಾ. ಶರ್ಮಿಳಾ ಕುಮಾರಿ ಧ್ವಜಾರೋಹಣವನ್ನು ನೆರವೇರಿಸಿದರು. ಕಾರ್ಯಕ್ರಮದಲ್ಲಿ ಕಾಲೇಜಿನ ಡೀನ್( ವಿದ್ಯಾರ್ಥಿ ವ್ಯವಹಾರಗಳು) ಹಾಗೂ ವ್ಯವಹಾರ ಆಡಳಿತ ವಿಭಾಗದ ನಿರ್ದೇಶಕ ಡಾ. ಸೈಯದ್ ಅಮೀನ್ ಅಹಮದ್ ಹಾಗೂ ಸಿವಿಲ್ ವಿಭಾಗದ ಮುಖ್ಯಸ್ಥ ಡಾ. ಪಾಲಕ್ಷಪ್ಪ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು.
ದೈಹಿಕ ಶಿಕ್ಷಣ ನಿರ್ದೇಶಕ ಇಕ್ಬಾಲ್, ರಾಷ್ಟ್ರೀಯ ಸೇವಾ ಯೋಜನೆಯ ಘಟಕಾಧಿಕಾರಿ ಪ್ರೊ. ಇಸ್ಮಾಯಿಲ್ ಎಸ್. ಉಪಸ್ಥಿತರಿದ್ದರು. ವಿದ್ಯಾರ್ಥಿಗಳು ಹಾಗೂ ಬೋಧಕ, ಬೋಧಕೇತರ ಸಿಬ್ಬಂದಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.