×
Ad

ಇಂದು ಸಂಜೆ ಪುನೀತ್ ಗೆ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ; ಬೆಂಗಳೂರಿಗೆ ಆಗಮಿಸಿದ ನಟ ರಜನಿಕಾಂತ್

Update: 2022-11-01 13:22 IST

ಬೆಂಗಳೂರು, ನ.1: ನಟ ಪುನೀತ್ ರಾಜ್ ಕುಮಾರ್ ಅವರಿಗೆ ಇಂದು ಸಂಜೆ (ಮಂಗಳವಾರ) ಮರಣೋತ್ತರ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಮಾಡಲಾಗುತ್ತಿದ್ದು, ಸಮಾರಂಭದಲ್ಲಿ  ಪಾಲ್ಗೊಳ್ಳಲಿರುವ ಹಿರಿಯ ನಟ ರಜನಿಕಾಂತ್ (Rajinikanth) ಅವರು ಬೆಂಗಳೂರಿನ ಹೆಚ್.ಎ.ಎಲ್ ವಿಮಾನ‌ ನಿಲ್ದಾಣಕ್ಕೆ ಆಗಮಿಸಿದರು. 

ವಿಮಾನ‌ ನಿಲ್ದಾಣಕ್ಕೆ ಆಗಮಿಸಿದ ರಜನಿಕಾಂತ್ ಅವರನ್ನು ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ಅವರು ಸ್ವಾಗತಿಸಿ, ಬರಮಾಡಿಕೊಂಡರು. 

ಇಂದು ಸಂಜೆ 4ಗಂಟೆಗೆ ವಿಧಾನಸೌಧದ ಮೆಟ್ಟಿಲುಗಳ ಮೇಲೆ ನಡೆಯಲಿರುವ ಅದ್ದೂರಿ ಕಾರ್ಯಕ್ರಮಕ್ಕೆ ಸಕಲ ಸಿದ್ಧತೆ ಭರದಿಂದ ಸಾಗಿದೆ. ಕಾರ್ಯಕ್ರಮದಲ್ಲಿ ರಜಿನಿಕಾಂತ್ ಸೇರಿದಂತೆ ಟಾಲಿವುಡ್ ನಟ ಜ್ಯೂ.ಎನ್‍ಟಿಆರ್, ಇನ್ಫೋಸಿಸ್ ಮುಖ್ಯಸ್ಥೆ ಸುಧಾಮೂರ್ತಿ ವಿಶೇಷ ಆಹ್ವಾನಿತರಾಗಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.

Similar News