ಅರಕಲಗೂಡು: ಹಾಸ್ಟೆಲ್ ನಲ್ಲಿ ವಿದ್ಯಾರ್ಥಿ ಆತ್ಮಹತ್ಯೆ
Update: 2022-11-01 14:45 IST
ಅರಕಲಗೂಡು,ನ.1: ವಿದ್ಯಾರ್ಥಿಯೋರ್ವ ಹಾಸ್ಟೆಲ್ ನಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಅರಕಲಗೂಡು ತಾಲೂಕಿನಲ್ಲಿ ನಡೆದಿರುವುದಾಗಿ ವರದಿಯಾಗಿದೆ.
ತಾಲೂಕಿನ ಸಾಲುಮರದ ತಿಮ್ಮಕ್ಕ ಉದ್ಯಾನವನದ ಪಕ್ಕದಲ್ಲಿರುವ ಅಲ್ಪಸಂಖ್ಯಾತರ ವಸತಿ ಶಾಲೆಯಲ್ಲಿ 9ನೇ ತರಗತಿ ವ್ಯಾಸಂಗ ಮಾಡುತ್ತಿದ್ದ ಮಹಮ್ಮದ್ ಕೈಫ್ (14) ಮೃತಪಟ್ಟ ಬಾಲಕ ಎಂದು ತಿಳಿದುಬಂದಿದೆ.
ಶಾಲೆಗೆ ವಿದ್ಯಾರ್ಥಿ ಹೋಗಲು ಹಿಂದೇಟು ಹಾಕುತ್ತಿದ್ದ. ಈ ಹಿನ್ನೆಲೆ ಮನೆಯವರ ಒತ್ತಾಯದಿಂದ ಸಹೋದರ ಮಧ್ಯಾಹ್ನ ಶಾಲೆಗೆ ಕರೆದುಕೊಂಡು ಹೋಗಿ ಬಿಟ್ಟು ಬಂದಿದ್ದ ಎನ್ನಲಾಗಿದೆ. ಇದರಿಂದ ಮನನೊಂದು ಮಹಮ್ಮದ್ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ತಿಳಿದುಬಂದಿದೆ.
ಈ ಸಂಬಂಧ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.