×
Ad

ಉಡುಪಿ : ರಾಜ್ಯೋತ್ಸವ ಪ್ರಯುಕ್ತ ಮಕ್ಕಳಿಗೆ ಕನ್ನಡ ಗೀತೆ ಸ್ಪರ್ಧೆ

Update: 2022-11-01 19:32 IST

ಉಡುಪಿ : ರಾಜ್ಯ ಬಾಲಭವನ, ಜಿಲ್ಲಾ ಬಾಲಭವನ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ವತಿಯಿಂದ ಜಿಲ್ಲಾ ಬಾಲಭವನದಲ್ಲಿ ಇಂದು ಕನ್ನಡ ರಾಜ್ಯೋತ್ಸವ ಪ್ರಯುಕ್ತ ಮಕ್ಕಳಿಗೆ ಕನ್ನಡ ಗೀತೆ ಸ್ಪರ್ಧೆಯನ್ನು ಏರ್ಪಡಿಸಲಾಗಿತ್ತು.

ಅಧ್ಯಕ್ಷತೆಯನ್ನು ಜಿಲ್ಲಾ ಕಾನೂನು ಸೇವೆ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶೆ ಶರ್ಮಿಳಾ ವಹಿಸಿದ್ದರು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಪ್ರಭಾರ ಉಪ ನಿರ್ದೇಶಕಿ ವೀಣಾ ವಿವೇಕಾನಂದ ಪ್ರಾಸ್ತಾವಿಕವಾಗಿ ಮಾತನಾಡಿದರು.

ಜಿಲ್ಲಾ ಬಾಲಭವನದ ಕಾರ್ಯಕ್ರಮ ಸಂಯೋಜಕಿ ರಮ್ಯ ಸ್ವಾಗತಿಸಿದರು. ಕಛೇರಿ ಸಹಾಯಕಿ ಶ್ವೇತಾ ವಂದಿಸಿದರು. ಸ್ಪರ್ಧೆಯಲ್ಲಿ 5 ರಿಂದ 15 ವರ್ಷ ದೊಳಗಿನ ಸುಮಾರು 70 ಮಕ್ಕಳು ಭಾಗವಹಿಸಿದ್ದರು.

Similar News