×
Ad

ಧರ್ಮಸ್ಥಳ | ಜಾನುವಾರು ಅಕ್ರಮ ಸಾಗಾಟ ಪತ್ತೆ: ಇಬ್ಬರು ಆರೋಪಿಗಳ ಬಂಧನ

Update: 2022-11-02 11:35 IST

ಬೆಳ್ತಂಗಡಿ, ನ.2: ಪುದುವೆಟ್ಟು ವಿನಲ್ಲಿ ಅಕ್ರಮವಾಗಿ ಜಾನುವಾರುಗಳನ್ನು ಸಾಗಾಟ ಮಾಡುತ್ತಿದ್ದ ಪ್ರಕರಣವೊಂದನ್ನು ಧರ್ಮಸ್ಥಳ ಪೊಲೀಸರು ಪತ್ತೆ ಹಚ್ಚಿದ್ದು, ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.

ನೆರಿಯ ಗ್ರಾಮದ ನಿವಾಸಿಗಳಾದ ಅಬ್ದುಲ್ ಅಝೀಝ್(55) ಮುಹಮ್ಮದ್ ರಫೀಕ್ (39) ಬಂಧಿತ ಆರೋಪಿಗಳಾಗಿದ್ದಾರೆ. ಇನ್ನೋರ್ವ ಆರೋಪಿ ಅನ್ವರ್ ತಪ್ಪಿಸಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಆರೋಪಿಗಳು ಪಿಕಪ್ ವಾಹನದಲ್ಲಿ ಮೂರು ಕರುಗಳು ಹಾಗೂ ಮೂರು ದನಗಳು ಸೇರಿದಂತೆ ಆರು ಜಾನುವಾರುಗಳನ್ನು ಹಿಂಸಾತ್ಮಕ ರೀತಿಯಲ್ಲಿ ತುಂಬಿ ಸಾಗಾಟ ಮಾಡುತ್ತಿದ್ದರೆನ್ನಲಾಗಿದ್ದು, ಈ ಬಗ್ಗೆ ಖಚಿತ ಮಾಹಿತಿಯನ್ನು ಆಧರಿಸಿ ಪೊಲೀಸರು ಪುದುವೆಟ್ಟು ಗ್ರಾಮದ ಬಾಯಿತ್ತಾರ್ ಎಂಬಲ್ಲಿ ವಾಹನ ನಿಲ್ಲಿಸಿ ಪರಿಶೀಲಿಸಿದ್ದಾರೆ.

ಆರೋಪಿಗಳು ಯಾವುದೇ ಪರವಾನಿಗೆಯಿಲ್ಲದೆ ಕಾಯರ್ತಡ್ಕ ನಿವಾಸಿ ಧರ್ಣಪ್ಪ ಗೌಡ ಎಂಬವರಿಂದ ಜಾನುವಾರಗಳನ್ನು ಖರೀದಿಸಿ ಮಾಂಸ ಮಾಡಲೆಂದು ಸಾಗಾಟ ಮಾಡುತ್ತಿದ್ದರೆನ್ನಲಾಗಿದೆ. ಈ ಹಿನ್ನಲೆಯಲ್ಲಿ ಪೊಲೀಸರು ವಾಹನ ಹಾಗೂ ಜಾನುವಾರುಗಳನ್ನು ವಶಕ್ಕೆ ಪಡೆದು ಆರೋಪಿಗಳನ್ನು ಬಂಧಿಸಿದ್ದಾರೆ.

ವಶಕ್ಕೆ ಪಡೆದಿರುವ ಜಾನುವಾರುಗಳ ಒಟ್ಟು ಮೌಲ್ಯ 40,000 ರೂ. ಎಂದು ಅಂದಾಜಿಸಲಾಗಿದೆ.

ಈ ಬಗ್ಗೆ ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Similar News