ಇರಾನ್ ದಾಳಿಯ ಬಗ್ಗೆ ಗುಪ್ತಚರ ವರದಿ: ಸೌದಿ ಅರೆಬಿಯಾದಲ್ಲಿ ಕಟ್ಟೆಚ್ಚರ

Update: 2022-11-02 17:26 GMT

ರಿಯಾದ್, ನ.2: ಇರಾನ್ (Iran)ನಲ್ಲಿ ನಡೆಯುತ್ತಿರುವ ಹಿಜಾಬ್ ವಿರೋಧಿ ಪ್ರತಿಭಟನೆ(Anti-hijab protest)ಯಿಂದ ಬೇರೆಡೆ ಗಮನ ಸೆಳೆಯುವ ಉದ್ದೇಶದಿಂದ ಸೌದಿ ಅರೆಬಿಯಾ ಹಾಗೂ ಇರಾಕ್(Saudi Arabia and Iraq) ನ ನಿರ್ದಿಷ್ಟ ಪ್ರದೇಶಗಳನ್ನು ಗುರಿಯಾಗಿಸಿ ಇರಾನ್ ದಾಳಿ ನಡೆಸುವ ಸಾಧ್ಯತೆಯಿದೆ ಎಂದು ಗುಪ್ತಚರ ವರದಿ ಲಭಿಸಿದ್ದು ದೇಶದಲ್ಲಿ ಕಟ್ಟೆಚ್ಚರ ವಹಿಸಲಾಗಿದೆ ಎಂದು ಸೌದಿ ಅರೆಬಿಯಾದ ಅಧಿಕಾರಿಗಳು ಹೇಳಿದ್ದಾರೆ. ಈ ಮಾಹಿತಿಯನ್ನು ಅಮೆರಿಕದೊಂದಿಗೆ ಹಂಚಿಕೊಳ್ಳಲಾಗಿದೆ ಎಂದು ಅಮೆರಿಕದ ವಾಲ್ ಸ್ಟ್ರೀಟ್ ಜರ್ನಲ್ ವರದಿ ಮಾಡಿದೆ.

ಈ ಮಾಹಿತಿಯಿಂದ ತೀವ್ರ ಕಳವಳಗೊಂಡಿದ್ದು ಸೌದಿ ಆಡಳಿತದೊಂದಿಗೆ ನಿರಂತರ ಸಂಪರ್ಕದಲ್ಲಿ ಇರುವುದಾಗಿ ಶ್ವೇತಭವನದ ರಾಷ್ಟ್ರೀಯ ಭದ್ರತಾ ಸಮಿತಿಯ ಅಧಿಕಾರಿಗಳು ಹೇಳಿದ್ದಾರೆ. ಗುಪ್ತಚರ ವರದಿಯ ಬಳಿಕ ಸೌದಿ ಅರೆಬಿಯಾ, ಅಮೆರಿಕ ಹಾಗೂ ಮಧ್ಯಪ್ರಾಚ್ಯದ ಇತರ ದೇಶಗಳ ಸೇನೆಯನ್ನು ಕಟ್ಟೆಚ್ಚರದಲ್ಲಿ ಇರಿಸಲಾಗಿದೆ ಎಂದು ವರದಿಯಾಗಿದೆ. ದೇಶದಲ್ಲಿ ನಡೆಯುತ್ತಿರುವ ಪ್ರತಿಭಟನೆಗೆ ಅಮೆರಿಕ, ಸೌದಿ ಅರೆಬಿಯಾ ಮತ್ತು ಇಸ್ರೇಲ್ ಪ್ರಚೋದನೆ ನೀಡುತ್ತಿದೆ ಎಂದು ಇರಾನ್ ಆರೋಪಿಸುತ್ತಿದೆ.

Similar News