ಬಾಲಕಿಯರಿಗೆ ಲೈಂಗಿಕ ದೌರ್ಜನ್ಯ ಪ್ರಕರಣ: ಮುರುಘಾ ಶರಣರ ನ್ಯಾಯಾಂಗ ಬಂಧನದ ಅವಧಿ ವಿಸ್ತರಣೆ

Update: 2022-11-03 09:35 GMT

ಚಿತ್ರದುರ್ಗ, ನ.3: ಅಪ್ರಾಪ್ತ ವಯಸ್ಸಿನ ಬಾಲಕಿಯರಿಗೆ ಲೈಂಗಿಕ ಕಿರುಕುಳ ಮತ್ತು ದೌರ್ಜನ್ಯವೆಸಗಿದ ಆರೋಪದಲ್ಲಿ ಪೊಕ್ಸೊ ಕಾಯ್ದೆಯಡಿ ಬಂಧನದಲ್ಲಿರುವ ಚಿತ್ರದುರ್ಗದ ಮುರುಘಾಮಠದ ಡಾ.ಶಿವಮೂರ್ತಿ ಮುರುಘಾ ಶರಣರ ನ್ಯಾಯಾಂಗ ಬಂಧನದ ಅವಧಿ ನವೆಂಬರ್ 8ರವರೆಗೆ ವಿಸ್ತರಣೆಯಾಗಿದೆ. 

ಬಂಧನದ ಅವಧಿ ಅಂತ್ಯಗೊಂಡಿದ್ದರಿಂದ ಡಾ.ಶಿವಮೂರ್ತಿ ಮುರುಘಾ ಶರಣರನ್ನು ಗುರುವಾರ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು. ವಿಚಾರಣೆ ನಡೆಸಿದ ನ್ಯಾಯಾಧೀಶೆ ಬಿ.ಕೆ.ಕೋಮಲಾ ನ್ಯಾಯಾಂಗ ಬಂಧನದ ಅವಧಿಯನ್ನು ವಿಸ್ತರಿಸಿದರು.

ಪ್ರಕರಣದ ಎ2 ಆರೋಪಿ ಮಹಿಳಾ ವಾರ್ಡನ್​ ಹಾಗೂ ಎ3 ಆರೋಪಿ ಪರಮಶಿವಯ್ಯ ಅವರ ನ್ಯಾಯಾಂಗ ಬಂಧನ ಅವಧಿಯನ್ನು ವಿಸ್ತರಿಸಿ ನ್ಯಾಯಾಲಯವು ಆದೇಶ ಹೊರಡಿಸಿದೆ.

ಇದನ್ನೂ ಓದಿ: ತುಮಕೂರು: ಮನೆಯಲ್ಲೇ ಹೆರಿಗೆ ಬಳಿಕ ತಾಯಿ, ಅವಳಿ ಮಕ್ಕಳು ಸಾವು

Similar News