ಕಲಬುರಗಿ | ಸೇತುವೆ ಮೇಲಿಂದ ಉರುಳಿ ಬಿದ್ದ ಕೆಎಸ್ಸಾರ್ಟಿಸಿ ಬಸ್; 30ಕ್ಕೂ ಹೆಚ್ಚು ಜನರಿಗೆ ಗಾಯ

Update: 2022-11-03 11:04 GMT

ಕಲಬುರಗಿ: ಕೆಎಸ್ಸಾರ್ಟಿಸಿ  ಬಸ್ ಒಂದು ಸೇತುವೆ ಮೇಲಿಂದ ಉರುಳಿ ಬಿದ್ದ ಪರಿಣಾಮ ಬಸ್ಸಿನಲ್ಲಿದ್ದ 30ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಂಭೀರ ಗಾಯಗಳಾಗಿರುವ ಘಟನೆ ಶಹಾಬದ್ ಮಾರ್ಗಾದ ಕಾಗಿಣಾ ಸೇತುವೆ ಮೇಲೆ ಗುರುವಾರ ಮಧ್ಯಾಹ್ನ ನಡೆದಿದೆ.

ಕಾಗಿಣಾ ಸೇತುವೆ ದಾಟವ ವೇಳೆ ಸಾರಿಗೆ ಬಸ್ ನ ಎಕ್ಸಲ್ ತುಂಡಾಗಿರುವುದರಿಂದ ಈ ಅವಘಡ ಸಂಭವಿಸಿದೆನ್ನಲಾಗಿದೆ. 

ಘಟನೆಯಲ್ಲಿ ಕೆಲವರ ಕೈ ಮತ್ತು ಕಾಲುಗಳಿಗೆ ಗಂಭೀರ ಗಾಯಗಳಾಗಿರುವ ಬಗ್ಗೆ ತಿಳಿದು ಬಂದಿದ್ದು, ಗಾಯಗೊಂಡ ಪ್ರಯಾಣಿಕರನ್ನು ಕಲಬುರಗಿ ಜಿಲ್ಲಾ ಆಸ್ಪತ್ರೆ ಸೇರಿದಂತೆ ಸ್ಥಳೀಯ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದು ಬಂದಿದೆ.

ಶಹಾಬಾದ್ ನಗರ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

Similar News