2ನೇ ಪೊಕ್ಸೊ ಪ್ರಕರಣ: ಮುರುಘಾ ಶ್ರೀ ಮೂರು ದಿನ ಪೊಲೀಸ್ ಕಸ್ಟಡಿಗೆ

Update: 2022-11-03 12:27 GMT

ಚಿತ್ರದುರ್ಗ: ಚಿತ್ರದುರ್ಗದ ಮುರುಘಾ ಮಠದ ಡಾ. ಶಿವಮೂರ್ತಿ ಶರಣರ ವಿರುದ್ಧದ 2ನೇ ಪೊಕ್ಸೊ ಪ್ರಕರಣದಲ್ಲಿ ಅವರನ್ನು ಮೂರು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿ ಚಿತ್ರದುರ್ಗದ 2ನೇ ಹೆಚ್ಚುವರಿ ಸೆಷನ್ಸ್​ ನ್ಯಾಯಾಲಯದ ಆದೇಶ ಹೊರಡಿಸಿದೆ. 

ಅಪ್ರಾಪ್ತ ವಯಸ್ಸಿನ ಬಾಲಕಿಯರಿಗೆ ಲೈಂಗಿಕ ಕಿರುಕುಳ ಮತ್ತು ದೌರ್ಜನ್ಯವೆಸಗಿದ ಆರೋಪದಲ್ಲಿ ಮೊದಲ ಪೊಕ್ಸೊ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಅವರನ್ನು ನವೆಂಬರ್ 5ರವರೆಗೆ ಪೊಲೀಸ್ ಕಸ್ಟಡಿಗೆ ನೀಡಿ, ನ್ಯಾಯಾಲಯ ಆದೇಶ ನೀಡಿದೆ. ಬಳಿಕ ಅವರನ್ನು ವಿಚಾರಣೆಗಾಗಿ ಡಿವೈಸ್ಪಿ ಕಚೇರಿಗೆ ಕರೆದೊಯ್ಯಲಾಯಿತೆನ್ನಲಾಗಿದೆ. 

ಇನ್ನು ಇದೇ ಆರೋಪಕ್ಕೆ ಸಂಬಂಧಿಸಿದಂತೆ ನ್ಯಾಯಾಂಗ ಬಂಧನದಲ್ಲಿರುವ ಶಿವಮೂರ್ತಿ ಮುರುಘಾ ಶರಣರು ಮತ್ತು ಇತರ ಆರೋಪಿಗಳ ನ್ಯಾಯಾಂಗ ಬಂಧನ ಅವಧಿಯನ್ನು ನಗರದ 2ನೇ ಹೆಚ್ಚುವರಿ ಸೆಷನ್ಸ್ ನ್ಯಾಯಾಲಯವು ನ 8ರವರೆಗೂ ವಿಸ್ತರಿಸಿದೆ.

ಇದನ್ನೂ ಓದಿ: ಬಾಲಕಿಯರಿಗೆ ಲೈಂಗಿಕ ದೌರ್ಜನ್ಯ ಪ್ರಕರಣ: ಮುರುಘಾ ಶರಣರ ನ್ಯಾಯಾಂಗ ಬಂಧನದ ಅವಧಿ ನ.8ರವರೆಗೆ ವಿಸ್ತರಣೆ

Similar News