ಕಾನ್‌ಸ್ಟೆಬಲ್ ನೇಮಕಾತಿ ವಯೋಮಿತಿ ಹೆಚ್ಚಳ ಮಾಡಿ ರಾಜ್ಯ ಸರಕಾರ ಆದೇಶ

Update: 2022-11-03 15:02 GMT

ಬೆಂಗಳೂರು, ನ.3: ಪೊಲೀಸ್ ಇಲಾಖೆಯ ಕಾನ್‌ಸ್ಟೆಬಲ್ (ಸಿವಿಲ್) ಮತ್ತು ಪೊಲೀಸ್ ಕಾನ್‌ಸ್ಟೆಬಲ್(ಸಿಎಆರ್ ಮತ್ತು ಡಿಎಆರ್) ಹುದ್ದೆಗಳಿಗೆ ನಿಗದಿಪಡಿಸಿರುವ ಗರಿಷ್ಠ ವಯೋಮಿತಿಯನ್ನು ಒಂದು ಬಾರಿಗೆ ಮಾತ್ರ ಅನ್ವಯ ಆಗುವಂತೆ ಎರಡು ವರ್ಷಗಳಿಗೆ ಹೆಚ್ಚಳ ಮಾಡಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ. 

2022-23ನೆ ಸಾಲಿನಲ್ಲಿ ನೇಮಕಾತಿಗೆ ಆಹ್ವಾನಿಸಿರುವ ಪೊಲೀಸ್ ಕಾನ್‌ಸ್ಟೆಬಲ್(ಸಿಎಆರ್ ಮತ್ತು ಡಿಎಆರ್) 420 ಮತ್ತು 3064 ಸೇರಿ ಒಟ್ಟು 3,484 ಹುದ್ದೆಗಳಿಗೆ ಮತ್ತು ಪೊಲೀಸ್ ಕಾನ್ಸ್ ಟೇಬಲ್ (ಸಿವಿಲ್) 1137 ಮತ್ತು 454 ಸೇರಿದಂತೆ 1,591 ಹುದ್ದೆಗಳಿಗೆ ಮಾತ್ರ ಗರಿಷ್ಠ ವಯೋಮಿತಿಯನ್ನು ಎರಡುವರ್ಷಗಳಿಗೆ ಹೆಚ್ಚಿಸಲಾಗಿದೆ. ಅದೇ ರೀತಿ, ಒಂದು ವಾರಗಳ ಕಾಲ ಅವಧಿ ವಿಸ್ತರಿಸಲಾಗಿದೆ

ಇನ್ನೂ ಪೊಲೀಸ್ ಕಾನ್‌ಸ್ಟೆಬಲ್(ಸಿವಿಲ್) ಹುದ್ದೆ ಮತ್ತು ಪೊಲೀಸ್ ಕಾನ್‌ಸ್ಟೆಬಲ್ (ಸಿಎಆರ್ ಮತ್ತು ಡಿಎಆರ್) ಹುದ್ದೆಗಳಿಗೆ ಗರಿಷ್ಠ ವಯೋಮಿತಿಯ ಕುರಿತಂತೆ ಸಂಬಂಧಿಸಿದ ವೃಂದ ಮತ್ತು ನೇಮಕಾತಿ ನಿಯಮಗಳಿಗೆ ಅಗತ್ಯ ತಿದ್ದುಪಡಿ ಷರತ್ತಿಗೆ ಒಳಪಟ್ಟು ಈ ಆದೇಶ ಹೊರಡಿಸಲಾಗಿದೆ ಎಂದು ಒಳಾಡಳಿತ ಇಲಾಖೆಯ ಸರಕಾರದ ಅಧೀನ ಕಾರ್ಯದರ್ಶಿ ಆದೇಶದಲ್ಲ್ಲಿ ತಿಳಿಸಿದ್ದಾರೆ.

Similar News